ಕಾಶ್ಮೀರದಲ್ಲಿ ಈ ವರ್ಷ ಭದ್ರತಾ ಪಡೆಗಳಿಂದ 100 ಉಗ್ರರು ಹತ್ಯೆ
ಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶ್ರೀನಗರ: ಈ ವರ್ಷದ ಆರಂಭದಿಂದ ಇಲ್ಲಿಯವರೆಗೂ ಕಾಶ್ಮೀರದಲ್ಲಿ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಹತ್ಯೆಗೀಡಾದ 100 ಉಗ್ರರ ಪೈಕಿ ಲಷ್ಕರ್ ಇ ತೊಯ್ಬಾ ಸಂಘಟನೆಯ ಉಗ್ರರೇ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 63 ಎಲ್ ಇಟಿ ಉಗ್ರರು ಹತ್ಯೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾಶ್ಮೀರದಲ್ಲಿ ಈ ವರ್ಷ ಆರಂಭವಾದಾಗಿನಿಂದಲೂ 29 ವಿದೇಶಿಗರು ಸೇರಿದಂತೆ 100 ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಇದು ಕಳೆದ ವರ್ಷ ಹತ್ಯೆಗೀಡಾದ ಉಗ್ರರಿಗಿಂತ ದುಪ್ಪಟ್ಟಾಗಿದೆ. ಕಳೆದ ವರ್ಷ ಓರ್ವ ವಿದೇಶಿ ಸೇರಿದಂತೆ ಐವತ್ತು ಉಗ್ರರನ್ನು ಹತ್ಯೆ ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಹತ್ಯೆಗೀಡಾದ ಉಗ್ರರಲ್ಲಿ 63 ಮಂದಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ್ದರೆ, ಉಳಿದವರು ಜೈಶ್ -ಇ-ಮೊಹಮ್ಮದ್ ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


