ದೇಶ

ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ, ನಾಲ್ವರು ಸಾವು

ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು, ನಾಲ್ವರು ದುರ್ಮರಣ ಹೊಂದಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ, ನಾಲ್ವರು ಸಾವು
ಭೂ ಕುಸಿತವಾಗಿರುವ ಸ್ಥಳದ ಚಿತ್ರ
Published On :

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಭಾರೀ ಭೂ ಕುಸಿತ ಸಂಭವಿಸಿದ್ದು, ನಾಲ್ವರು ದುರ್ಮರಣ ಹೊಂದಿದ್ದಾರೆ. ಬೋರಗಾಂವ್ ಸಮೀಪದ ನಿಜಾರಪರ್ ಪ್ರದೇಶದಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾಲ್ವರು ಜೀವಂತ ಸಮಾಧಿಯಾಗಿದ್ದಾರೆ. ಸೋಮವಾರ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭೂ ಕುಸಿತವಾಗಿದೆ.

 ಘಟನೆ ನಂತರ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿದ್ದ ನಾಲ್ಕು ಮೃತದೇಹಗಳನ್ನು ಹೊರಗೆ ತಂದಿದ್ದಾರೆ. ಮೃತಪಟ್ಟವರು ಈ ಪ್ರದೇಶದಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿದ್ದರು, ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಭಾರೀ ಮಳೆಯಿಂದ ಮನೆ ಮುರಿದು ಬಿದ್ದಿದ್ದು, ಬೆಟ್ಟ ಕುಸಿತದಿಂದ ರಾಶಿ ರಾಶಿ ಮಣ್ಣು ಮನೆಯೊಳಗೆ ಬಂದಿದೆ. ಇದರಿಂದಾಗಿ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವುದಾಗಿ  ಸಹಾಯಕ ಪೊಲೀಸ್ ಆಯುಕ್ತ ನಂದಿನಿ ಕಾಕಟಿ ಹೇಳಿದ್ದಾರೆ. ಅವಶೇಷಗಳಡಿ ಸಿಲುಕಿದ ನಾಲ್ಕು ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ ಎಂದು ಗುವಾಹಟಿ ಡಿಸಿಪಿ ನಬನೀತ್ ಮಹಾಂತ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.