ದೇಶ

ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ!

ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ಮಾಹಿತಿ ನೀಡಿದೆ.

ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸೂಚನೆ!
ಪ್ರಧಾನಿ ಮೋದಿ
Published On :

ನವದೆಹಲಿ: ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ಮಾಹಿತಿ ನೀಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಾರ್ಯಾಲಯವು ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ತಿಳಿಸಿದೆ.

ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.