ತಾಯಿ ಸೋನಿಯಾ ಗಾಂಧಿಗೆ ಅನಾರೋಗ್ಯ; ಇಡಿ ವಿಚಾರಣೆ ಮುಂದೂಡುವಂತೆ ರಾಹುಲ್ ಗಾಂಧಿ ಮನವಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಆದರೆ ಈ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನಾಳೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ. ಆದರೆ ಈ ವಿಚಾರಣೆಯನ್ನು ಮುಂದೂಡುವಂತೆ ರಾಹುಲ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.
ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಬೇಕೆಂದು ರಾಹುಲ್ ಮನವಿ ಮಾಡಿಕೊಂಡಿದ್ದು, ಈ ಬೇಡಿಕೆಗೆ ಜಾರಿ ನಿರ್ದೇಶನಾಲಯ ಇದುವರೆಗೂ ಯಾವುದೇ ಉತ್ತರ ನೀಡಿಲ್ಲ.
ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು, ತಮ್ಮ ತಾಯಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅನಾರೋಗ್ಯದ ಕಾರಣ ನೀಡಿ, ವಿಚಾರಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇದನ್ನು ಓದಿ: ಜೂನ್ 17ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಇಡಿ ಸಮನ್ಸ್; ದೆಹಲಿ ಪೊಲೀಸರದ್ದು ಗೂಂಡಾಗಿರಿ ಎಂದ ಕಾಂಗ್ರೆಸ್!
ಅಕ್ರಮ ಹಣ ವರ್ಗಾವಣೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಸೋಮವಾರದವರೆಗೆ ಕಾಲಾವಕಾಶ ಕೋರಿದ್ದಾರೆ. ರಾಹುಲ್ ಗಾಂಧಿ ಅವರನ್ನು ಇಡಿ ಸತತ ಮೂರು ದಿನವೂ ಪ್ರಶ್ನಿಸಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸತತ ಮೂರು ದಿನಗಳ ಕಾಲ ಸುಮಾರು 27 ಗಂಟೆ ವಿಚಾರಣೆ ಎದುರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


