ದೇಶದಲ್ಲಿ ಕೊರೋನಾ: ನಿನ್ನೆಗಿಂತ ಇಂದು ಕಡಿಮೆ; 9,923 ಹೊಸ ಪ್ರಕರಣ ಪತ್ತೆ, 17 ಸಾವು
ದೇಶದಲ್ಲಿ ಮತ್ತೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 9,923 ಹೊಸ ಪ್ರಕರಣ ಪತ್ತೆಯಾಗಿದೆ. ನಿನ್ನೆಗಿಂತ ಇಂದು ಅಲ್ಪ ಕುಸಿತವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 9,923 ಹೊಸ ಪ್ರಕರಣ ಪತ್ತೆಯಾಗಿದೆ. ನಿನ್ನೆಗಿಂತ ಇಂದು ಅಲ್ಪ ಕುಸಿತವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಇದೇ ಅವಧಿಯಲ್ಲಿ ದೇಶದಲ್ಲಿ 17ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದು, ದೇಶಾದ್ಯಂತ ಒಟ್ಟಾರೇ ಮೃತರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೇ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.18 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 7,293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,27,15,193ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ. 98. 61 ರಷ್ಟಿದ್ದು, ಮರಣ ಪ್ರಮಾಣ ಶೇ. 2.55 ರಷ್ಟಿದೆ.
ಇದೇ ಅವಧಿಯಲ್ಲಿ ದೇಶಾದ್ಯಂತ ಒಟ್ಟಾರೇ 3,88,641 ಟೆಸ್ಟ್ ಮಾಡಲಾಗಿದೆ. ಈ ಮೂಲಕ ಒಟ್ಟಾರೇ ಪರೀಕ್ಷೆ ಸಂಖ್ಯೆ 85.85 ಕೋಟಿಗೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆಯವರೆಗೆ ದೇಶದಲ್ಲಿ 196.32 ಕೋಟಿಗೂ ಮೀರಿದ ಕೋವಿಡ್ ಲಸಿಕೆ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


