ದೇಶ

ಜೈಪುರ: ಪ್ರಧಾನಿ ಮೋದಿ ಹತ್ಯೆಯ ಬೆದರಿಕೆ ಹಾಕಿದ ಹಂತಕರು! ವಿಡಿಯೋ

ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ದುಷರ್ಮಿಗಳು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ.

ಜೈಪುರ: ಪ್ರಧಾನಿ ಮೋದಿ ಹತ್ಯೆಯ ಬೆದರಿಕೆ ಹಾಕಿದ ಹಂತಕರು! ವಿಡಿಯೋ
ಹಂತಕರು
Published On :

ಜೈಪುರ:  ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಸ್ಥಳೀಯ ಟೇಲರ್ ಅನ್ನು ದುಷರ್ಮಿಗಳು  ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಜಸ್ತಾನದ ಉದಯಪುರದಲ್ಲಿ ನಡೆದಿದೆ. 

ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದು, ಬಳಿಕ ವಿಡಿಯೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ  ಹಂತಕರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಬೆದರಿಕೆ ಹಾಕಿದ್ದಾರೆ.

ಹಾಡುಹಗಲೇ ನಡೆದ ಘಟನೆ ನಂತರ ಸ್ಥಳೀಯರು ಪ್ರತಿಭಟನೆ ನಡೆಸಿದ್ದು, ಮಲ್ದಾಸ್  ಸ್ಟ್ರೀಟ್ ನಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು.  ಘಟನೆ ಸಂಬಂಧ ಕೆಲವು ಆರೋಪಿಗಳನ್ನು ಗುರುತಿಸಲಾಗಿದ್ದು, ಆ ಮೂಲಕ ತನಿಖೆ ನಡೆಸಲಾಗುವುದು ಎಂದು ಉದಯಪುರ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ಕುಮಾರ್ ಚೌಧರಿ ಹೇಳಿದ್ದಾರೆ.

ಯುವಕನ ಬರ್ಬರ ಹತ್ಯೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಈ ಘಟನೆಯಲ್ಲಿ ಭಾಗಿಯಾಗಿರುವ ಕ್ರಿಮಿನಲ್ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಪೊಲೀಸರು ಎಲ್ಲಾ ಆಯಮಾಗಳಲ್ಲಿ ತನಿಖೆ ನಡೆಸುತ್ತಿದ್ದು, ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.