ಹಂತಕರನ್ನು ಗಲ್ಲಿಗೇರಿಸಿ ಇಲ್ಲದಿದ್ದರೆ ಇಂದು ನನ್ನ ಗಂಡ, ನಾಳೆ ಮತ್ತೊಬ್ಬರು: ಕನ್ನಯ್ಯಲಾಲ್ ಪತ್ನಿ ರೋಧನ!
ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾಲಾಲ್ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ ಉದಯಪುರದಲ್ಲಿ ಕನ್ಹಯ್ಯಾಲಾಲ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಗರದಲ್ಲಿ ಕರ್ಫ್ಯೂ ವಿಧಿಸಿದ ಬಳಿಕವೂ ಅಂತಿಮ ಯಾತ್ರೆಗೆ ಅಪಾರ ಜನಸ್ತೋಮ ನೆರೆದಿತ್ತು.

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾಲಾಲ್ ಹತ್ಯೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಇಂದು ಮಧ್ಯಾಹ್ನ ಉದಯಪುರದಲ್ಲಿ ಕನ್ಹಯ್ಯಾಲಾಲ್ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು. ನಗರದಲ್ಲಿ ಕರ್ಫ್ಯೂ ವಿಧಿಸಿದ ಬಳಿಕವೂ ಅಂತಿಮ ಯಾತ್ರೆಗೆ ಅಪಾರ ಜನಸ್ತೋಮ ನೆರೆದಿತ್ತು.
ಇದನ್ನೂ ಓದಿ: ನೆತ್ತರಿನಲ್ಲೂ ಧರ್ಮ ಹುಡುಕುವ ಏಕೈಕ ಪಕ್ಷ ಕಾಂಗ್ರೆಸ್: ಹಿಂದೂಗಳನ್ನು ಹತ್ಯೆಗೈದು ಅವರ ಕಳೇಬರದಲ್ಲಿ ಭಾರತವನ್ನು ಜೋಡಿಸುತ್ತೀರಾ?
ಟೇಲರ್ ಕನ್ಹಯ್ಯಾಲಾಲ್ ಸಾಹು ಅವರ ಅಂತಿಮ ಸಂಸ್ಕಾರದ ವೇಳೆ ಭಾರೀ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿತ್ತು. ಕನ್ಹಯ್ಯಾಲಾಲ್ ಅವರ ಮೃತ ದೇಹದ ಅಂತಿಮಯಾತ್ರೆ ಹೊರಟಾಗ ಅವರ ಪತ್ನಿ ಮತ್ತು ಕುಟುಂಬದವರು ದುಃಖ ಇಮ್ಮಡಿಗೊಂಡಿತ್ತು. ಕನ್ಹಯ್ಯಾಲಾಲ್ ಸಾಹು ಅವರ ಪತ್ನಿ, 'ಆರೋಪಿಯನ್ನು ಗಲ್ಲಿಗೇರಿಸಿ, ಇಂದು ನನ್ನ ಗಂಡನನ್ನು ಕೊಂದಿದ್ದಾರೆ, ನಾಳೆ ಇತರರನ್ನು ಕೊಲ್ಲುತ್ತಾರೆ' ಎಂದು ಆಕ್ರೋಶ ಹೊರ ಹಾಕಿದರು.
26 ಬಾರಿ ಇರಿತ.. ಕುತ್ತಿಗೆ ಬೇರ್ಪಡಿಸಲು ಯತ್ನ
ಕನ್ಹಯ್ಯಾಲಾಲ್ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಮರಣೋತ್ತರ ಪರೀಕ್ಷೆಯ ವರದಿಯ ಪ್ರಕಾರ ಆರೋಪಿಯು 26 ಬಾರಿ ಹರಿತವಾದ ಆಯುಧಗಳಿಂದ ಕನ್ಹಯ್ಯಾ ಮೇಲೆ ಹಲ್ಲೆ ಮಾಡಿದ್ದಾರೆ. ಆತನ ಮೈಮೇಲೆ 13 ಗಾಯಗಳಾಗಿವೆ. ಇವುಗಳಲ್ಲಿ ಹೆಚ್ಚಿನವು ಕುತ್ತಿಗೆಯ ಸುತ್ತ ಇದ್ದವು. ಇದೇ ಸಮಯದಲ್ಲಿ, ಆರೋಪಿಗಳು ದೇಹದಿಂದ ಕುತ್ತಿಗೆಯನ್ನು ಬೇರ್ಪಡಿಸಲು ಪ್ರಯತ್ನಿಸಿದ್ದರು ಎಂದು ಮರಣೋತ್ತರ ಪರೀಕ್ಷೆಯ ರಿಪೋರ್ಟ್ ನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


