ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕ್ವತದಡಿಯ ಆಡಳಿತ ವಿರೋಧಿ ಅಲೆಯಿಂದ ಪಂಜಾಬ್ ನಲ್ಲಿ ಸೋಲು- ಕಾಂಗ್ರೆಸ್
ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕತ್ವದಡಿಯ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಕಾಂಗ್ರೆಸ್ ಹೊರಬರಲು ಸಾಧ್ಯವಿಲ್ಲ, ಅದಕ್ಕಾಗಿ ಜನರು ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ಹೇಳಿದ್ದಾರೆ.

ನವದೆಹಲಿ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ನಾಯಕತ್ವದಡಿಯ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಕಾಂಗ್ರೆಸ್ ಹೊರಬರಲು ಸಾಧ್ಯವಿಲ್ಲ, ಅದಕ್ಕಾಗಿ ಜನರು ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಮತ ಹಾಕಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಗುರುವಾರ ಹೇಳಿದ್ದಾರೆ.
ಮಣ್ಣಿನ ಮಗ ಚರಣ್ ಜಿತ್ ಸಿಂಗ್ ಚನ್ನಿ ಅವರ ಮೂಲಕ ಕಾಂಗ್ರೆಸ್ ಪಂಜಾಬಿನಲ್ಲಿ ಹೊಸ ನಾಯಕತ್ವ ಪರಿಚಯಿಸಿತ್ತು. ಆದರೆ, ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಇಡೀ ನಾಲ್ಕೂವರೆ ವರ್ಷಗಳ ಆಡಳಿತ ವಿರೋಧಿ ಅಲೆಯಿಂದ ಹೊರಬರಲು ಸಾಧ್ಯವಾಗಲಿಲ್ಲ. ಇದೇ ಕಾರಣದಿಂದಾಗಿ ಜನರು ಬದಲಾವಣೆಗಾಗಿ ಎಎಪಿ ಗೆಲ್ಲಿಸಿರುವುದಾಗಿ ಸುದ್ದಿಗೋಷ್ಠಿಯಲ್ಲಿ ಸುರ್ಜೇವಾಲ ಹೇಳಿದರು.
117 ಸದಸ್ಯಬಲದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ 37 ಸ್ಥಾನಗಳಲ್ಲಿ ಗೆಲುವು ಸಾಧಿಸುವುದರೊಂದಿಗೆ ಬಹುಮತ ಪಡೆದುಕೊಂಡಿದೆ. ಅಲ್ಲದೇ 54 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಕಾಂಗ್ರೆಸ್ ಕೇವಲ 4 ಸ್ಥಾನಗಳಲ್ಲಿ ಜಯಗಳಿಸಿದ್ದು, 5ರಲ್ಲಿ ಮುನ್ನಡೆಯಲ್ಲಿದೆ.
ಎಸ್ ಎಡಿ ಕೇವಲ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು, ಎರಡು ಸ್ಥಾನಗಳಲ್ಲಿ ಮುನ್ನಡೆ ಕಾಯ್ಜುಕೊಂಡಿದೆ. ಬಿಜೆಪಿ, ಪಕ್ಷೇತರರು ತಲಾ 1 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ. ಪಂಜಾಬ್ ನಲ್ಲಿ ಭಗವಂತ್ ಮಾನ್ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


