ದೇಶ

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 46 ಸೇರಿ ದೇಶದಲ್ಲಿ 53 ಮಂದಿ ಸಾವು

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,046 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,54,638ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,618ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳ ಅವಧಿಯಲ್ಲಿ ಕೇರಳದಲ್ಲಿ 46 ಸೇರಿ ದೇಶದಲ್ಲಿ 53 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,046 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,54,638ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,618ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ವೇಳೆ ದೇಶದಲ್ಲಿ ಕೇರಳದಲ್ಲಿ 46 ಮಂದಿ ಸೇರಿದಂತೆ 53 ಮಂದಿ ಸಾವಿಗೀಡಾಗಿದ್ದು, ಈವರೆಗೆ  5,29,077 ಜನರು ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.4 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.78ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ಈವರೆಗೆ ದೇಶದಲ್ಲಿ 4,41,07,943 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ದೈನಂದಿನ ಮರಣ ಪ್ರಮಾಣ ಶೇ 1.18ರಷ್ಟಿದೆ.

ಸಚಿವಾಲಯದ ಪ್ರಕಾರ, ದೇಶದಾದ್ಯಂತ ನಡೆಯುತ್ತಿರುವ ಲಸಿಕೆ ಅಭಿಯಾನದ ಅಡಿಯಲ್ಲಿ 219.4 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.