ದೇಶ

ಗುಜರಾತ್‌ ಚುನಾವಣೆ: ಬಿಜೆಪಿ ಸೇರಲಿದ್ದಾರೆ ಮತ್ತೊಬ್ಬ ಕಾಂಗ್ರೆಸ್ ಶಾಸಕ

ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಪ್ರತಿಪಕ್ಷ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ನೀಡಿದ ಹಿರಿಯ ಶಾಸಕ ಭಗವಾನ್ ಬರಾದ್ ಅವರು ಬುಧವಾರ ಶಾಸಕ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ...

ಗುಜರಾತ್‌ ಚುನಾವಣೆ: ಬಿಜೆಪಿ ಸೇರಲಿದ್ದಾರೆ ಮತ್ತೊಬ್ಬ ಕಾಂಗ್ರೆಸ್ ಶಾಸಕ
ರಾಜೀನಾಮೆ ನೀಡಿದ ಭಗವಾನ್ ಬರಾದ್
Published On :

ಗಾಂಧಿನಗರ: ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಪ್ರತಿಪಕ್ಷ ಕಾಂಗ್ರೆಸ್‌ಗೆ ಮತ್ತೊಂದು ಆಘಾತ ನೀಡಿದ ಹಿರಿಯ ಶಾಸಕ ಭಗವಾನ್ ಬರಾದ್ ಅವರು ಬುಧವಾರ ಶಾಸಕ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ.

ಗಿರ್ ಸೋಮನಾಥ್ ಜಿಲ್ಲೆಯ ತಲಾಲಾ ಕ್ಷೇತ್ರವನ್ನು ಪ್ರತಿನಿಧಿಸುವ ಬರಾದ್ ಅವರು ತಮ್ಮ ರಾಜೀನಾಮೆ ಪತ್ರವನ್ನು ಗುಜರಾತ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ್ ಠಾಕೋರ್ ಅವರಿಗೆ ಕಳುಹಿಸಿದ್ದಾರೆ.

ತಮ್ಮ ಬೆಂಬಲಿಗರೊಂದಿಗೆ ಸಮಾಲೋಚಿಸಿದ ನಂತರ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ ಮತ್ತು ಚುನಾವಣಾ ಟಿಕೆಟ್ ಪಡೆಯಲು ಯಾವುದೇ ಪೂರ್ವ ಷರತ್ತು ಇಲ್ಲದೆ ಭಾರತೀಯ ಜನತಾ ಪಕ್ಷ ಸೇರುತ್ತೇನೆ ಎಂದು ಬರಾದ್ ಅವರು ರಾಜೀನಾಮೆ ಬಳಿಕ ಸುದ್ದಿಗಾರರಿಗೆ ತಿಳಿಸಿದ್ದಾರೆ.

ನಿನ್ನೆಯಷ್ಟೇ ಹಿರಿಯ ಕಾಂಗ್ರೆಸ್ ಶಾಸಕ ಮತ್ತು ಬುಡಕಟ್ಟು ನಾಯಕ ಮೋಹನ್‌ ಸಿನ್ಹಾ ರಟ್ವಾ ಅವರು ಶಾಸಕ ಮತ್ತು ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಪ್ರಮುಖ ಬುಡಕಟ್ಟು ನಾಯಕ, ರಟ್ವಾ ಅವರು 10 ಬಾರಿ ವಿಧಾನಸಭೆಯ ಸದಸ್ಯರಾಗಿದ್ದಾರೆ ಮತ್ತು ಪ್ರಸ್ತುತ ಮಧ್ಯ ಗುಜರಾತ್‌ನ ಛೋಟಾ ಉದಯಪುರ(ST) ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.