576 ಮಾತೃಭಾಷೆ ಸಮೀಕ್ಷೆ ಪೂರ್ಣ: ಕೇಂದ್ರ ಸರ್ಕಾರ
ಪ್ರತಿ ಸ್ಥಳೀಯ ಮಾತೃಭಾಷೆಯ ಅಸ್ಮಿತೆಯನ್ನು ಸಂರಕ್ಷಿಸಲು ಮತ್ತು ವಿಶ್ಲೇಷಿಸುವ ಉದ್ದೇಶದಿಂದ ದೇಶದ 576 ಮಾತೃಭಾಷೆಗಳ ಸಮೀಕ್ಷೆ ಮತ್ತು ಕ್ಷೇತ್ರೀಯ ವಿಡಿಯೊಗ್ರಫಿಯನ್ನು ಕೇಂದ್ರ ಗೃಹ ಸಚಿವಾಲಯ ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ನವದೆಹಲಿ: ಪ್ರತಿ ಸ್ಥಳೀಯ ಮಾತೃಭಾಷೆಯ ಅಸ್ಮಿತೆಯನ್ನು ಸಂರಕ್ಷಿಸಲು ಮತ್ತು ವಿಶ್ಲೇಷಿಸುವ ಉದ್ದೇಶದಿಂದ ದೇಶದ 576 ಮಾತೃಭಾಷೆಗಳ ಸಮೀಕ್ಷೆ ಮತ್ತು ಕ್ಷೇತ್ರೀಯ ವಿಡಿಯೊಗ್ರಫಿಯನ್ನು ಕೇಂದ್ರ ಗೃಹ ಸಚಿವಾಲಯ ಯಶಸ್ವಿಯಾಗಿ ಪೂರ್ಣಗೊಳಿಸಿದೆ.
ಪ್ರತಿ ಮಾತೃ ಭಾಷೆ ಹಾಗೂ ಆ ಭಾಷೆಗೆ ಸಂಬಂಧಿಸಿದ ಉಪ ಭಾಷೆಗಳ ಸಮೀಕ್ಷೆಯನ್ನು ಪೂರ್ಣಗೊಳಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದ್ದು, ರಾಷ್ಟ್ರೀಯ ಮಾಹಿತಿ ಕೇಂದ್ರದಲ್ಲಿ (ಎನ್ಐಸಿ) ವೆಬ್ ದಸ್ತಾವೇಜು (ಆರ್ಕೈವ್) ಸ್ಥಾಪಿಸಲು ಯೋಜಿಸಲಾಗಿದೆ ಎಂದು ಗೃಹ ಸಚಿವಾಲಯದ 2021-22ರ ವಾರ್ಷಿಕ ವರದಿಯಲ್ಲಿ ಹೇಳಲಾಗಿದೆ. ಇದೇ ಉದ್ದೇಶಕ್ಕಾಗಿ, ಆಂತರಿಕ ಭಾಷಾಶಾಸ್ತ್ರಜ್ಞರಿಂದ ಭಾಷಾ ದತ್ತಾಂಶಗಳ ಜೋಡಣೆ ಮತ್ತು ಸಂಪಾದನಾ ಪ್ರಕ್ರಿಯೆ ಮುಂದುವರೆದಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಭಾರತದ ಮಾತೃಭಾಷಾ ಸಮೀಕ್ಷೆ (ಎಮ್ಟಿಎಸ್ಐ) ಯೋಜನೆಯು 576 ಮಾತೃಭಾಷೆಗಳ ಕ್ಷೇತ್ರೀಯ ವೀಡಿಯೊಗ್ರಫಿಯೊಂದಿಗೆ ಯಶಸ್ವಿಯಾಗಿ ಪೂರ್ಣಗೊಂಡಿದೆ’ ಎಂದು ವರದಿಯಲ್ಲಿ ತಿಳಿಸಿದೆ. ದೇಶದ 6ನೇ ಪಂಚವಾರ್ಷಿಕ ಯೋಜನೆಯಿಂದಲೂ ಭಾರತದಲ್ಲಿ ಭಾಷಾ ಸಮೀಕ್ಷೆ (ಎಲ್ಎಸ್ಐ) ನಿಯಮಿತ ಸಂಶೋಧನಾ ಚಟುವಟಿಕೆಯಾಗಿ ನಡೆದುಕೊಂಡು ಬಂದಿದೆ ಎಂದು ಗೃಹ ಸಚಿವಾಲಯ ವರದಿಯಲ್ಲಿ ತಿಳಿಸಿದೆ.
ಈ ಯೋಜನೆಯಡಿಯಲ್ಲಿನ ಭಾಗವಾಗಿ ಜಾರ್ಖಂಡ್ನ ಸಂಪುಟವನ್ನು ಪೂರ್ಣಗೊಳಿಸಲಾಗಿದ್ದು, ಹಿಮಾಚಲ ಪ್ರದೇಶದ ಸಮೀಕ್ಷೆಯೂ ಪೂರ್ಣಗೊಳ್ಳುತ್ತಿದೆ. ತಮಿಳುನಾಡು ಮತ್ತು ಉತ್ತರ ಪ್ರದೇಶದ ಕ್ಷೇತ್ರಗಳಲ್ಲಿ ಸಮೀಕ್ಷೆ ಮುಂದುವರೆಯುತ್ತಿದೆ ವರದಿ ತಿಳಿಸಿದೆ. ಅಂತೆಯೇ ದಸ್ತಾವೇಜು ಉದ್ದೇಶಗಳಿಗಾಗಿ ವೀಡಿಯೊಗ್ರಾಫ್ ಮಾಡಿದ ಮಾತೃಭಾಷೆಗಳ ಭಾಷಣದ ಡೇಟಾವನ್ನು ಎನ್ಐಸಿ ಸರ್ವರ್ನಲ್ಲಿ ಅಪ್ಲೋಡ್ ಮಾಡಲಾಗುವುದು ಎಂದು ವರದಿ ತಿಳಿಸಿದೆ.
ಇನ್ನು ಮುಂಬರುವ ಜನಗಣತಿಯ ಬಗ್ಗೆಯೂ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಕೋವಿಡ್-19 ಸಾಂಕ್ರಾಮಿಕದ ಕಾರಣದಿಂದ ತಡೆಹಿಡಿಯಲಾಗಿದ್ದ ರಾಷ್ಟ್ರೀಯ ಜನಗಣತಿಯಲ್ಲಿ, ಸುಧಾರಿತ ಜಿಯೋಸ್ಪೇಷಿಯಲ್ ತಂತ್ರಜ್ಞಾನದ ಬಳಕೆ ಮಾಡಲಾಗುತ್ತದೆ. ಅತಿ ದೊಡ್ಡ ಗಣತಿ ಕಾರ್ಯವನ್ನು ಸುಗಮವಾಗಿ ನಡೆಸಲು ಹಲವಾರು ಹೊಸ ಉಪಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


