ಮರಾಠಿ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಪ್ರಕರಣ: ಎನ್ಸಿಪಿ ಶಾಸಕ ಜಿತೇಂದ್ರ ಅವ್ಹಾದ್ ಗೆ ಜಾಮೀನು
ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಎನ್ಸಿಪಿ ಶಾಸಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಹಾಗೂ ಇತರೆ 12 ಆರೋಪಿಗಳಿಗೆ ಥಾಣೆ ನ್ಯಾಯಾಲಯ ಶನಿವಾರ ಜಾಮೀನು...

ಮುಂಬೈ: ಮರಾಠಿ ಚಿತ್ರ ಹರ್ ಹರ್ ಮಹಾದೇವ್ ಪ್ರದರ್ಶನಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಎನ್ಸಿಪಿ ಶಾಸಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಹಾಗೂ ಇತರೆ 12 ಆರೋಪಿಗಳಿಗೆ ಥಾಣೆ ನ್ಯಾಯಾಲಯ ಶನಿವಾರ ಜಾಮೀನು ಮಂಜೂರು ಮಾಡಿದೆ.
ಶಾಸಕ ಹಾಗೂ ಅವರ ಬೆಂಬಲಿಗರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಾಗಿತ್ತು. ಥಾಣೆಯ ವಿವಿಯಾನ ಮಾಲ್ ನಲ್ಲಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಮರಾಠಿ ಚಿತ್ರ ಪ್ರದರ್ಶನವನ್ನು ಬಲವಂತವಾಗಿ ಸ್ಥಗಿತಗೊಳಿಸಿದ ಆರೋಪದ ಮೇಲೆ ಇಂದು ಬಂಧಿಸಲಾಗಿತ್ತು.
"ಈ ಚಿತ್ರದಲ್ಲಿ ಮರಾಠರ ಇತಿಹಾಸವನ್ನು ತಿರುಚಲಾಗಿದೆ ಮತ್ತು ಇಂತಹ ಚಲನಚಿತ್ರಗಳನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಅವಕಾಶ ನೀಡುವುದಿಲ್ಲ" ಎಂದು ಹೇಳಿದ್ದ ಶಾಸಕರು ಹಾಗೂ ಅವರ ಬೆಂಬಲಿಗರು, ಪ್ರೇಕ್ಷಕರಿಗೆ ಹೊರಹೋಗುವಂತೆ ಕೇಳಿಕೊಂಡಿದ್ದರು. ಈ ವೇಳೆ ಅಲ್ಲಿದ್ದ ಜನರು ಹಾಗೂ ಎನ್ಸಿಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಈ ಸಂಬಂಧ ಥಾಣೆ ಪೊಲೀಸರು ಪ್ರಕರಣವನ್ನೂ ದಾಖಲಿಸಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


