ಮಮತಾ ಬ್ಯಾನರ್ಜಿಯಿಂದ ಡಿಸೆಂಬರ್ 5 ರಂದು ಪ್ರಧಾನಿ ಮೋದಿ ಭೇಟಿ ಸಾಧ್ಯತೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಡಿಸೆಂಬರ್ 5 ರಂದು ದೆಹಲಿಯಲ್ಲಿ ಮುಖ್ಯಮಂತ್ರಿಗಳ ಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು...

ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಡಿಸೆಂಬರ್ 5 ರಂದು ದೆಹಲಿಯಲ್ಲಿ ಮುಖ್ಯಮಂತ್ರಿಗಳ ಸಭೆಯ ನೇಪಥ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.
ಸಂಭಾವ್ಯ ಭೇಟಿ ವೇಳೆ, ಕೇಂದ್ರದಿಂದ ರಾಜ್ಯಕ್ಕೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಮಮತಾ ಬ್ಯಾನರ್ಜಿ ಒತ್ತಾಯಿಸಬಹುದು ಎಂದು ಅವರು ಹೇಳಿದ್ದಾರೆ.
ಫರಕ್ಕಾ ಬ್ಯಾರೇಜ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಂಗಾ ನದಿಯ ಸವೆತದ ಸಮಸ್ಯೆಯನ್ನು ಅವರು ಮೋದಿಯವರ ಗಮನಕ್ಕೆ ತರಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಬಂಗಾಳದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಬಾಕಿ ಇರುವ ಹಣವನ್ನು ಬಿಡುಗಡೆ ಮಾಡುವಂತೆ ಪ್ರಧಾನಿ ಮೋದಿಗೆ ಮಮತಾ ಬ್ಯಾನರ್ಜಿ ಮನವಿ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


