ದೇಶ

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ಅವರು ಆದೇಶ ಹೊರಡಿಸಿದ್ದಾರೆ.

ಹಣ ಅಕ್ರಮ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್‌ಗೆ ಜಾಮೀನು ಮಂಜೂರು
ಅನಿಲ್‌ ದೇಶಮುಖ್
Published On :

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎನ್.ಜೆ. ಜಮಾದಾರ್ ಅವರು ಆದೇಶ ಹೊರಡಿಸಿದ್ದಾರೆ.

ಇದಕ್ಕೂ ಮುನ್ನ, ಎನ್‌ಸಿಪಿ ನಾಯಕನ ಅರ್ಜಿಯು ಆರು ತಿಂಗಳಿನಿಂದ ಬಾಕಿ ಉಳಿದಿರುವುದರಿಂದ ತ್ವರಿತವಾಗಿ ವಿಚಾರಣೆ ನಡೆಸಿ ತೀರ್ಮಾನಿಸುವಂತೆ ಸುಪ್ರೀಂ ಕೋರ್ಟ್ ಹೈಕೋರ್ಟ್‌ಗೆ ಸೂಚಿಸಿತ್ತು.

ದೇಶಮುಖ್ ಪರ ವಕೀಲರಾದ ವಿಕ್ರಮ್ ಚೌಧರಿ ಮತ್ತು ಅನಿಕೇತ್ ನಿಕಮ್, 'ಅವರ (ಅನಿಲ್ ದೇಶಮುಖ್) ವಯಸ್ಸು (72), ಆರೋಗ್ಯ ಮತ್ತು ಅವರಿಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಗಳಿಲ್ಲದಿರುವ ಅಂಶವನ್ನು ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು' ಎಂದು ವಾದಿಸಿದರು.

ಜಾರಿ ನಿರ್ದೇಶನಾಲಯದ (ಇ.ಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ ಅವರು ಅರ್ಜಿಯನ್ನು ವಿರೋಧಿಸಿ, 'ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಾಗದ ಯಾವುದೇ ಕಾಯಿಲೆಗಳಿಂದ ದೇಶಮುಖ್ ಬಳಲುತ್ತಿಲ್ಲ' ಎಂದು ವಾದಿಸಿದರು.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನವೆಂಬರ್ 2021 ರಲ್ಲಿ ಇಡಿಯಿಂದ ಬಂಧಿಸಲ್ಪಟ್ಟ ಅನಿಲ್ ದೇಶಮುಖ್ ಈಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಅವರು ಮಾಡಿದ ಆರೋಪದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿತ್ತು. ನಂತರ ನಂತರ ಇ.ಡಿ ಅವರನ್ನು ಬಂಧಿಸಿದೆ.

ದೇಶಮುಖ್ ಅವರು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಮತ್ತು ಮುಂಬೈನ ವಿವಿಧ ಬಾರ್ ಮತ್ತು ರೆಸ್ಟೋರೆಂಟ್‌ಗಳಿಂದ  4.7 ಕೋಟಿ ರೂಪಾಯಿ ಸಂಗ್ರಹಿಸಿದ್ದಾರೆ. ಅಕ್ರಮವಾಗಿ ಗಳಿಸಿದ ಹಣವನ್ನು ನಾಗ್ಪುರ ಮೂಲದ ಅವರ ಕುಟುಂಬದವರು ನಿಯಂತ್ರಿಸುವ ಶೈಕ್ಷಣಿಕ ಟ್ರಸ್ಟ್‌ ಶ್ರೀ ಸಾಯಿ ಶಿಕ್ಷಣ ಸಂಸ್ಥಾನಕ್ಕೆ ರವಾನಿಸಲಾಗಿದೆ ಎಂದು ಇ.ಡಿ ಆರೋಪಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.