ಕಾಂಗ್ರೆಸ್ ಜೊತೆ ಜೆಡಿಯು ವಿಲೀನಕ್ಕೆ ಪ್ರಶಾಂತ್ ಕಿಶೋರ್ ಹೇಳಿದ್ರು- ನಿತೀಶ್ ಕುಮಾರ್
ಕಾಂಗ್ರೆಸ್ ನೊಂದಿಗೆ ಜೆಡಿಯು ವಿಲೀನಗೊಳಿಸುವಂತೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ತನಗೆ ಹೇಳಿದ್ರು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನೊಂದಿಗೆ ಜೆಡಿಯು ವಿಲೀನಗೊಳಿಸುವಂತೆ ಚುನಾವಣಾ ತಂತ್ರಗಾರ-ರಾಜಕಾರಣಿ ಪ್ರಶಾಂತ್ ಕಿಶೋರ್ ತನಗೆ ಹೇಳಿದ್ರು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ಜಯಪ್ರಕಾಶ್ ನಾರಾಯಣ್ ಅವರ ಜನ್ಮಸ್ಥಳ ಸಿತಾಬ್ ಡಿಯಾರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರ್, ಕಿಶೋರ್ ಭಾರತೀಯ ಜನತಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
'ಪ್ರಶಾಂತ್ ಕಿಶೋರ್ ಇತ್ತೀಚೆಗೆ ನನ್ನನ್ನು ಭೇಟಿಯಾಗಲು ಬಂದಿದ್ದರು. ನಾನು ಅವರನ್ನು ಆಹ್ವಾನಿಸಿರಲಿಲ್ಲ. ಅವರು ತುಂಬಾ ಮಾತನಾಡುತ್ತಾರೆ ಆದರೆ ಒಮ್ಮೆ ಅವರು ನನ್ನ ಪಕ್ಷವನ್ನು ಕಾಂಗ್ರೆಸ್ನೊಂದಿಗೆ ವಿಲೀನಗೊಳಿಸುವಂತೆ ನನ್ನಗೆ ಹೇಳಿದ ಅಂಶವನ್ನು ಅವರು ಮರೆ ಮಾಚುತ್ತಾರೆ ಎಂದರು.
ಜೆಡಿಯು ನೇತೃತ್ವ ವಹಿಸಲು ಕುಮಾರ್ ಇತ್ತೀಚೆಗೆ ಮಾಡಿದ ಮನವಿಯನ್ನು ತಿರಸ್ಕರಿಸಿದ್ದೇನೆ ಎಂಬ ಕಿಶೋರ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ನಿತೀಶ್ ಕುಮಾರ್, ಅವರು ಏನು ಬೇಕಾದರೂ ಮಾತನಾಡಲಿ, ಅವರು ಏನು ಹೇಳಿದರೂ ಅರ್ಥವಿಲ್ಲ, ನಾಲ್ಕೈದು ವರ್ಷಗಳ ಹಿಂದೆ ಕಾಂಗ್ರೆಸ್ ನಲ್ಲಿ ಜೆಡಿಯು ವಿಲೀನಕ್ಕೆ ಹೇಳಿದ್ದ ಪ್ರಶಾಂತ್ ಕಿಶೋರ್ ಈಗ ಬಿಜೆಪಿ ಪರ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಸುಮಾರು 10-15 ದಿನಗಳ ಹಿಂದೆ ನಿತೀಶ್ ಕುಮಾರ್ ತಮ್ಮ ನಿವಾಸಕ್ಕೆ ಕರೆಸಿಕೊಂಡು, ಜೆಡಿಯು ನಾಯಕತ್ವ ವಹಿಸುವಂತೆ ಕೇಳಿಕೊಂಡಿದ್ದರು ಎಂದು ಕಿಶೋರ್ ಮಂಗಳವಾರ ಹೇಳಿಕೊಂಡಿದ್ದರು. "ಅದು ಸಾಧ್ಯವಿಲ್ಲ ಎಂದು ನಾನು ಹೇಳಿದ್ದೆ ಎಂದು ಕಿಶೋರ್ ಹೇಳಿದರು.
ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್ ಸಂಸ್ಥಾಪಕರಾದ ಪ್ರಶಾಂತ್ ಕಿಶೋರ್ ಅವರನ್ನು 2018ರಲ್ಲಿ ನಿತೀಶ್ ಕುಮಾರ್ ಜೆಡಿಎಸ್ ಗೆ ಸೇರ್ಪಡೆ ಮಾಡಿಕೊಂಡಿದ್ದರು ಅಲ್ಲದೇ ಕೆಲವೇ ವಾರಗಳಲ್ಲಿ ರಾಷ್ಟ್ರೀಯ ಉಪಾಧ್ಯಕ್ಷ ಸ್ಥಾನಕ್ಕೆ ಏರಿದ್ದರು. ಆದಾಗ್ಯೂ, ಪೌರತ್ವ (ತಿದ್ದುಪಡಿ) ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿಗೆ ಸಂಬಂಧಿಸಿದಂತೆ ನಿತೀಶ್ ಕುಮಾರ್ ಅವರೊಂದಿಗಿನ ಜಗಳದಿಂದಾಗಿ ಒಂದೆರಡು ವರ್ಷಗಳಲ್ಲಿ ಅವರನ್ನು ಪಕ್ಷದಿಂದ ಹೊರಹಾಕಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


