ರಷ್ಯಾ - ಉಕ್ರೇನ್ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ
ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು, "ರಾಜತಾಂತ್ರಿಕತೆ ಮತ್ತು ಮಾತುಕತೆ" ಹಾದಿಗೆ ತರ್ತು ವಾಪಸ್ ಆಗಬೇಕು ಎಂದು ಕರೆ ನೀಡಿದೆ.

ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಸಂಘರ್ಷ ಉಲ್ಬಣಗೊಂಡಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ಭಾರತ, ಯುದ್ಧವನ್ನು ತಕ್ಷಣವೇ ನಿಲ್ಲಿಸಬೇಕು, "ರಾಜತಾಂತ್ರಿಕತೆ ಮತ್ತು ಮಾತುಕತೆ" ಹಾದಿಗೆ ತರ್ತು ವಾಪಸ್ ಆಗಬೇಕು ಎಂದು ಕರೆ ನೀಡಿದೆ.
ಶನಿವಾರ ಕ್ರಿಮಿಯಾದಲ್ಲಿ ನಡೆದ ಬೃಹತ್ ಸ್ಫೋಟಕ್ಕೆ ಪ್ರತೀಕಾರವಾಗಿ ಮಾಸ್ಕೋ ಉಕ್ರೇನ್ ಮೇಲೆ ಸೋಮವಾರ ಕ್ಷಿಪಣಿ ದಾಳಿ ನಡೆಸಿದ್ದು, ದಾಳಿಯಲ್ಲಿ ಹಲವು ನಾಗರಿಕರು ಮೃತಪಟ್ಟಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು, ಯುದ್ಧದಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಸಂಘರ್ಷ ಶಮನಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಬೆಂಬಲಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದಾರೆ.
"ಮೂಲಸೌಕರ್ಯ ಮತ್ತು ನಾಗರಿಕರ ಸಾವುಗಳನ್ನು ಗುರಿಯಾಗಿಸುವುದು ಸೇರಿದಂತೆ ಉಕ್ರೇನ್‌ನಲ್ಲಿ ಸಂಘರ್ಷ ಉಲ್ಬಣಕ್ಕೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ" ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


