ದೇಶ

ಬಿಹಾರದಲ್ಲಿ ದೋಣಿ ಮಗುಚಿ ಅವಘಡ: ಏಳು ಮಂದಿ ಕೃಷಿ ಕಾರ್ಮಿಕರು ಸಾವು

ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಬಿಹಾರದಲ್ಲಿ ದೋಣಿ ಮಗುಚಿ ಅವಘಡ: ಏಳು ಮಂದಿ ಕೃಷಿ ಕಾರ್ಮಿಕರು ಸಾವು
ಸಾಂದರ್ಭಿಕ ಚಿತ್ರ
Published On :

ಕತಿಹಾರ್: ಬಿಹಾರದಲ್ಲಿ ಗಂಗಾನದಿ ಮತ್ತು ಅದರ ಉಪನದಿಗಳ ಸಂಗಮದಲ್ಲಿ ದೋಣಿ ಮುಳುಗಿ ಏಳು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ಕತಿಹಾರ್‌ನ ಜಿಲ್ಲಾಧಿಕಾರಿ ಉಜ್ಜಯಿನಿ ಮಿಶ್ರಾ ಅವರ ಪ್ರಕಾರ, 'ದೋಣಿ 10 ಜನರನ್ನು ಹೊತ್ತೊಯ್ಯುತ್ತಿತ್ತು. ಇವರೆಲ್ಲ ಕೃಷಿ ಕಾರ್ಮಿಕರಾಗಿದ್ದು, ಕೆಲಸದಿಂದ ಹಿಂತಿರುಗುತ್ತಿದ್ದರು. ಶನಿವಾರ ತಡರಾತ್ರಿ ಗಂಗಾ ಮತ್ತು ಬಾರಾಂಡಿಯ ಸಂಗಮದಲ್ಲಿ ದೋಣಿ ಮುಳುಗಿದೆ' ಎಂದು ತಿಳಿಸಿದ್ದಾರೆ.

ಅವಘಡದಲ್ಲಿ, ದೋಣಿಯಲ್ಲಿದ್ದ ಮೂವರು ಈಜಿ ಸುರಕ್ಷಿತವಾಗಿ ದಡ ಸೇರಿದ್ದಾರೆ. ಆದರೆ, ಉಳಿದ ಏಳು ಮಂದಿ ನಾಪತ್ತೆಯಾಗಿದ್ದಾರೆ. ಸ್ಥಳೀಯ ಡೈವರ್‌ಗಳು ಮತ್ತು ಎನ್‌ಡಿಆರ್‌ಎಫ್ ಸಿಬ್ಬಂದಿಯ ಸಹಾಯದಿಂದ ರಾತ್ರಿಯಿಡೀ ನಡೆದ ಶೋಧ ಕಾರ್ಯಾಚರಣೆಯ ನಂತರ ಮೃತದೇಹಗಳನ್ನು ಹೊರತೆಗೆಯಲಾಯಿತು ಎಂದು ಅವರು ಹೇಳಿದರು.

ಈಮಧ್ಯೆ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ಪ್ರತಿ ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.