ಕೋವಿಡ್-19: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 2 ಸಾವಿರಕ್ಕೂ ಅಧಿಕ ಹೊಸ ಪ್ರಕರಣ, 20 ಮಂದಿ ಸಾವು
24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 2,141 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,36,517ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 2,141 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,46,36,517ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 25,510ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಕೇರಳದಲ್ಲಿ 13 ಮಂದಿ ಸೇರಿದಂತೆ ದೇಶದಾದ್ಯಂತ 20 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಮಹಾರಾಷ್ಟ್ರದಲ್ಲಿ 7, ಕರ್ನಾಟಕ, ಪಂಜಾಬ್, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.06ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.76ರಷ್ಟಿದೆ. ಸದ್ಯ ದೇಶದಲ್ಲಿ ಈವರೆಗೆ 4,40,82,064 ಜನರು ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.
ದೈನಂದಿನ ಪಾಸಿಟಿವಿಟಿ ದರ ಶೇ 0.85ರಷ್ಟಿದ್ದು, ಮರಣ ಪ್ರಮಾಣ ಶೇ 1.19ರಷ್ಟಿದೆ. ಸಚಿವಾಲಯದ ಪ್ರಕಾರ, ದೇಶದಲ್ಲಿ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 219.46 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


