ದೇಶ

ರಾಜ್'ಘಾಟ್'ನಲ್ಲಿ ಮಹಾತ್ಮ ಗಾಂಧಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮನ

ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ರಾಜ್'ಘಾಟ್'ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದರು.

ರಾಜ್'ಘಾಟ್'ನಲ್ಲಿ ಮಹಾತ್ಮ ಗಾಂಧಿಗೆ ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಮನ
ಮಲ್ಲಿಕಾರ್ಜುನ ಖರ್ಗೆ
Published On :

ನವದೆಹಲಿ: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ರಾಜ್'ಘಾಟ್'ಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದರು.

ಬಲಿಪಾಡ್ಯಮಿಯ ದಿನವಾದ ಬುಧವಾರ ಮಲ್ಲಿಕಾರ್ಜುನ ಖರ್ಗೆ ಅವರು ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಔಪಚಾರಿಕವಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಅಧಿಕಾರ ಸ್ವೀಕಾರಕ್ಕೂ ಮುನ್ನ ದೆಹಲಿಯ ರಾಜ್'ಘಾಟ್'ಗೆ ತೆರಳಿದ ಖರ್ಗೆ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಗೆ ನಮನ ಸಲ್ಲಿಸಿದರು.

ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹೊರಗುಳಿದ ನಂತರ ಕಾಂಗ್ರೆಸ್ ಪಕ್ಷದ ಉನ್ನತ ಹುದ್ದೆಗೆ ನೇರ ಸ್ಪರ್ಧೆಯಲ್ಲಿ ತಿರುವನಂತಪುರಂ ಸಂಸದ ಶಶಿ ತರೂರ್ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೇರ ಪೈಪೋಟಿಗೆ ಇಳಿದಿದ್ದರು. ಈ ಚುನಾವಣೆಯಲ್ಲಿ ಶಶಿ ತರೂರ್ ಅವರನ್ನು ಮಲ್ಲಿಕಾರ್ಜುನ ಖರ್ಗೆ ಸೋಲಿಸಿದ್ದರು.

ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಕೆಲ ಸಮಯ ಕಳೆದರು. ಇಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಲಿದ್ದು, ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಸ್ಮಾರಕಗಳಿಗೆ ಭೇಟಿ ನೀಡಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.