ಮೋರ್ಬಿ ಸೇತುವೆ ಕುಸಿತ ಪ್ರಕರಣ: ರಾಜ್‌ಕೋಟ್ ಬಿಜೆಪಿ ಸಂಸದನ ಕುಟುಂಬದ 12 ಮಂದಿ ಸಾವು
ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಮೋರ್ಬಿ: ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಬಿದ್ದ ದುರಂತದಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರು, "ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ.
"ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಅಪಘಾತದಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಿಸಲಾಗಿದೆ ಮತ್ತು ಮಚ್ಚು ನದಿಯಲ್ಲಿದ್ದವರ ಶವಗಳನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ. ರಕ್ಷಣಾ ದೋಣಿಗಳು ಕೂಡ ಸ್ಥಳದಲ್ಲಿವೆ" ಎಂದು ತಿಳಿಸಿದ್ದಾರೆ.
ಸೇತುವೆ ತೆರೆಯಲು ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಸಂಸದರು, "ಈ ದುರಂತ ಹೇಗೆ ಸಂಭವಿಸಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು, ಸತ್ತವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು, ಸ್ಥಳೀಯರು ಮತ್ತು ಎನ್‌ಜಿಒಗಳು ಇದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


