ಮೊರ್ಬಿ ದುರಂತ: ನರಹತ್ಯೆಗೆ ಯತ್ನ, ಸೇತುವೆ ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲು
ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

ಮೊರ್ಬಿ: ಗುಜರಾತ್ನ ಮೊರ್ಬಿಯ ನವೀಕರಣಗೊಂಡ ಶತಮಾನಗಳಷ್ಟು ಹಳೆಯದಾದ ಸೇತುವೆ ಕುಸಿದು ಕುಸಿತ ಘಟನೆಗೆ ಸಂಬಂಧಿಸಿದಂತೆ ಸೇತುವೆಯನ್ನು ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ನರಹತ್ಯೆಗೆ ಯತ್ನ ಆರೋಪದಲ್ಲಿ ಗುಜುರಾತ್ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.
ಮೊರ್ಬಿ ಸೇತುವೆ ನಿರ್ವಹಣೆ ಮಾಡುತ್ತಿದ್ದ ಏಜೆನ್ಸಿ ವಿರುದ್ಧ ಐಪಿಸಿ ಸೆಕ್ಷನ್ 308( ನರಹತ್ಯೆಗೆ ಪ್ರಯತ್ನ) 304 ಮತ್ತು 114ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೊರ್ಬಿ ವಿಭಾಗದ ಪೊಲೀಸ್ ಇನ್ಸ್ ಪೆಕ್ಟರ್ ಪ್ರಕಾಶ್ ಬಾಯಿ ದೇಕವಾಡಿಯಾ ತಿಳಿಸಿದ್ದಾರೆ.
ಏಜೆನ್ಸಿ ಸೇತುವೆ ಬಗ್ಗೆ ನಿಗಾ ವಹಿಸಿರಲಿಲ್ಲ. ಅದರ ಗುಣಮಟ್ಟವನ್ನು ಪರೀಕ್ಷಿಸದೆ ಅಕ್ಟೋಬರ್ 26 ರಂದು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ನಿರ್ವಹಣೆಯಲ್ಲಿ ತೀವ್ರ ನಿರ್ಲಕ್ಷ್ಯ ಕಂಡುಬಂದಿದೆ. ವರದಿಗಳ ಪ್ರಕಾರ ನವೀಕರಣಕ್ಕಾಗಿ 8 ತಿಂಗಳ ಕಾಲ ಸೇತುವೆಯನ್ನು ಮುಚ್ಚಲಾಗಿತ್ತು. ಖಾಸಗಿ ಏಜೆನ್ಸಿಯಿಂದ ನವೀಕರಣ ಮಾಡಲಾಗಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.
ಸರಿಯಾದ ರೀತಿಯಲ್ಲಿ ನವೀಕರಣ, ನಿರ್ವಹಣೆ ಮಾಡದೆ, ತೀವ್ರ ನಿರ್ಲಕ್ಷ್ಯದಿಂದ ಕೇಬಲ್ ಸೇತುವೆಯನ್ನು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲಾಗಿತ್ತು. ಹೀಗಾಗಿ ವಿವಿಧ ಸೆಕ್ಷನ್ ಗಳಡಿ ನಿರ್ವಹಣಾ ಏಜೆನ್ಸಿ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ಪೊಲೀಸ್ ಇನ್ಸ್ ಪೆಕ್ಟರ್ ದೇಕವಾಡಿಯಾ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


