ದೇಶ

ಎಲ್ಗಾರ್ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಜಾಮೀನು ನಿರಾಕರಿಸಿದ ವಿಶೇಷ ಎನ್ಐಎ ಕೋರ್ಟ್

ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್‌ಐಎ ನ್ಯಾಯಾಲಯ ತಿರಸ್ಕರಿಸಿದೆ.

ಎಲ್ಗಾರ್ ಪ್ರಕರಣ: ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾಗೆ ಜಾಮೀನು ನಿರಾಕರಿಸಿದ ವಿಶೇಷ ಎನ್ಐಎ ಕೋರ್ಟ್
ಗೌತಮ್ ನವ್ಲಾಖಾ
Published On :

ಮುಂಬೈ: ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದ ಆರೋಪಿ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಲ್ಲಿನ ವಿಶೇಷ ಎನ್‌ಐಎ ನ್ಯಾಯಾಲಯ ತಿರಸ್ಕರಿಸಿದೆ.

ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನವ್ಲಾಖಾ ಅವರನ್ನು 2018ರ ಆಗಸ್ಟ್ 28ರಂದು ಬಂಧಿಸಲಾಗಿತ್ತು. ಮೊದಲಿಗೆ ಅವರನ್ನು ಗೃಹಬಂಧನದಲ್ಲಿ ಇರಿಸಲಾಗಿತ್ತು. ನಂತರ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು ಸದ್ಯ ನವಿ ಮುಂಬೈನ ತಲೋಜಾ ಜೈಲಿನಲ್ಲಿದ್ದಾರೆ.

ವಿಶೇಷ ನ್ಯಾಯಾಧೀಶ ರಾಜೇಶ್ ಜೆ ಕಟಾರಿಯಾ ಅವರು ನವ್ಲಾಖಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಈ ಪ್ರಕರಣವು 2017ರ ಡಿಸೆಂಬರ್ 31ರಂದು ಪುಣೆಯ ಶನಿವಾರವಾಡದಲ್ಲಿ ನಡೆದ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಮಾಡಿದ ಆಪಾದಿತ ಪ್ರಚೋದಕ ಭಾಷಣಗಳಿಗೆ ಸಂಬಂಧಿಸಿದ್ದಾಗಿದೆ. ಇನ್ನು ಪ್ರಚೋದಿತ ಹೇಳಿಕೆಯಿಂದಾಗಿ ಮರುದಿನ ನಗರದ ಹೊರವಲಯದಲ್ಲಿರುವ ಕೋರೆಗಾಂವ್-ಭೀಮಾ ಯುದ್ಧ ಸ್ಮಾರಕದ ಬಳಿ ಹಿಂಸಾಚಾರ ನಡೆಯಲು ಕಾರಣವಾಗಿತ್ತು ಎಂದು ಪೊಲೀಸರು ಹೇಳಿದ್ದಾರೆ.

ಪುಣೆ ಪೊಲೀಸರು ಕೂಡ ಸಮಾವೇಶಕ್ಕೆ ಮಾವೋವಾದಿಗಳ ಬೆಂಬಲವಿದೆ ಎಂದು ಹೇಳಿದ್ದರು. ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಈ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿತು. ಇದರಲ್ಲಿ ಹತ್ತಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಶಿಕ್ಷಣ ತಜ್ಞರನ್ನು ಆರೋಪಿಗಳೆಂದು ಹೆಸರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.