ದೇಶ

ಬಿಜೆಪಿ ಸಂಸದ ರಂಜೀತಾ ಕೋಲಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ!

ರಾಜಸ್ಥಾನದ ಭರತ್‌ಪುರದಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಬಿಜೆಪಿ ಸಂಸದ ರಂಜೀತಾ ಕೋಲಿ ಆಪ್ತ ಸಹಾಯಕನಿಗೆ ಗುಂಡಿಕ್ಕಿ ಹತ್ಯೆ!
ಸಂಗ್ರಹ ಚಿತ್ರ
Published On :

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತ ಬಿಜೆಪಿ ಮುಖಂಡನನ್ನು ಕಿರ್ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಎರಡು ಬೈಕ್‌ಗಳು ಹಾಗೂ ಕಾರುಗಳಲ್ಲಿ ಬಂದ ದುಷ್ಕರ್ಮಿಗಳು ಭಾನುವಾರ ರಾತ್ರಿ ಸರ್ಕ್ಯೂಟ್ ಹೌಸ್‌ನಿಂದ ಕಾರಿನಲ್ಲಿ ಮನೆಗೆ ಹೋಗುತ್ತಿದ್ದ ಕಿರ್ಪಾಲ್ ಸಿಂಗ್ ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಭರತ್‌ಪುರದ ಬಿಜೆಪಿ ಸಂಸದ ರಂಜೀತಾ ಕೋಲಿ ಅವರ ಆಪ್ತ ಸಹಾಯಕ ಸಿಂಗ್ ಅವರು ದಾಳಿಯಲ್ಲಿ ಏಳು ಗುಂಡುಗಳು ತಗುಲಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಿದರು.

ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದೆ. ಇನ್ನು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಥುರಾ ಗೇಟ್ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ರಾಮನಾಥ್ ಸಿಂಗ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.