ದೇಶ

ಬ್ರಿಟನ್​​ ನೂತನ ಪ್ರಧಾನಿ ಲಿಜ್ ಟ್ರಸ್ ಅಭಿನಂದಿಸಿದ ಪ್ರಧಾನಿ ಮೋದಿ

ಬ್ರಿಟನ್‌ ನೂತನ ಪ್ರಧಾನಿಯಾಗಿ ಆಯ್ಕೆಯಾದ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.

ಬ್ರಿಟನ್​​ ನೂತನ ಪ್ರಧಾನಿ ಲಿಜ್ ಟ್ರಸ್ ಅಭಿನಂದಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ - ಲಿಜ್ ಟ್ರಸ್
Published On :

ನವದೆಹಲಿ: ಬ್ರಿಟನ್‌ ನೂತನ ಪ್ರಧಾನಿಯಾಗಿ ಆಯ್ಕೆಯಾದ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅಭಿನಂದಿಸಿದ್ದಾರೆ.

ಪ್ರಧಾನಿ ಮೋದಿ ಅವರು ತಮ್ಮ ಅಭಿನಂದನಾ ಸಂದೇಶದಲ್ಲಿ ಟ್ರಸ್ ನಾಯಕತ್ವದಲ್ಲಿ ಭಾರತ-ಬ್ರಿಟನ್ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯು ಮತ್ತಷ್ಟು ಬಲಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

"ಬ್ರಿಟನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಕ್ಕೆ ತಮಗೆ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಭಾರತ-ಯುಕೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆ ಮತ್ತಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸವಿದೆ. ನಿಮ್ಮ ಹೊಸ ಪಾತ್ರ ಮತ್ತು ಜವಾಬ್ದಾರಿಗಳಿಗೆ ಶುಭ ಹಾರೈಸುತ್ತೇನೆ" ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಕನ್ಸರ್ವೇಟಿವ್ ಪಕ್ಷದ ನಾಯಕಿ ಟ್ರಸ್ ಅವರು ಗೆಲ್ಲುವ ಕಡಿಮೆ ಅವಕಾಶಗಳೊಂದಿಗೆ ಚುನಾವಣಾ ಕಣಕ್ಕಿಳಿದಿದ್ದರು. ಆದರೆ ಈ ಚುನಾವಣೆಯಲ್ಲಿ ಭಾರತೀಯ ಮೂಲದ ರಿಷಿ ಸುನಕ್ ಅವರನ್ನು ಸೋಲಿಸಿದರು. ಗೆಲುವಿನ ನಂತರ, ಈ ಕಠಿಣ ಸಮಯದಲ್ಲಿ ಯುಕೆಗಾಗಿ ತಾನು ದಿಟ್ಟ ಕ್ರಮ ತೆಗೆದುಕೊಳ್ಳುವುದಾಗಿ ಟ್ರಸ್ ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.