ಕೋವಿಡ್-19: ದೇಶಾದ್ಯಂತ 24 ಗಂಟೆಗಳಲ್ಲಿ 3,230 ಹೊಸ ಪ್ರಕರಣ ಪತ್ತೆ, 4,255 ಸೋಂಕಿತರ ಚೇತರಿಕೆ!
ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, 24 ಗಂಟೆಗಳಲ್ಲಿ ದೇಶಾದ್ಯಂತ 3,230 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.

ನವದೆಹಲಿ: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿದ್ದು, 24 ಗಂಟೆಗಳಲ್ಲಿ ದೇಶಾದ್ಯಂತ 3,230 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಈ ಕುರಿತು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,230 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಆ ಮೂಲಕ ದೇಶದ ಒಟ್ಟು ಸೋಂಕಿತರ ಸಂಖ್ಯೆ 44,575,473ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ದೇಶಾದ್ಯಂತ 32 ಸೋಂಕಿತರು ಸಾವನ್ನಪ್ಪಿದ್ದು ಆ ಮೂಲಕ ದೇಶದಲ್ಲಿ ಕೋವಿಡ್ ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 5,28,562ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,255 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಸಿಕೊಂಡವರ ಸಂಖ್ಯೆ 4,40,04,553ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 42,358 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೈನಂದಿನ ಪಾಸಿಟಿವಿಟಿ ದರ ಶೇ1.18ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರ ಶೇ 1.58ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಕೋವಿಡ್-19 ಲಸಿಕಾ ಅಭಿಯಾನದ ಅಡಿಯಲ್ಲಿ 217.82 ಕೋಟಿ ಕೋವಿಡ್ ವಿರುದ್ದದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


