ಕೋವಿಡ್-19: ಕಳೆದ 24 ಗಂಟೆಗಳಲ್ಲಿ 3,615 ಹೊಸ ಪ್ರಕರಣ, 22 ಮಂದಿ ಸಾವು
ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,615 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3,615 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,79,088ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 40,979ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾಗಿರುವ ಅಂಕಿಅಂಶಗಳ ಪ್ರಕಾರ, ಕೇರಳದಲ್ಲಿ 8 ಮಂದಿ ಸೇರಿ ದೇಶದಾದ್ಯಂತ 22 ಜನರು ಸಾವಿಗೀಡಾಗಿದ್ದಾರೆ. ಈವರೆಗೆ 5,28,584 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ದೇಶದಲ್ಲಿ ಶೇ 0.09 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.72ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 217.96 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ. ಈ ಪೈಕಿ 94.80 ಕೋಟಿ ಡೋಸ್‌ಗಳನ್ನು ಎರಡನೇ ಡೋಸ್ ಆಗಿ ನೀಡಲಾಗಿದೆ. 20.69 ಕೋಟಿ ಮುನ್ನೆಚ್ಚರಿಕಾ ಡೋಸ್‌ಗಳನ್ನು ನೀಡಲಾಗಿದೆ.
ಮಂಗಳವಾರಕ್ಕೆ ಕೊನೆಗೊಂಡಂತೆ 3,23,293 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈವರೆಗೆ 89.44 ಕೋಟಿಗೂ ಅಧಿಕ ಮಂದಿಗೆ ಪರೀಕ್ಷೆ ನಡೆಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


