ದೇಶದ್ರೋಹದ ಪ್ರಕರಣದಲ್ಲಿ ಶರ್ಜಿಲ್ ಇಮಾಮ್ ಗೆ ಜಾಮೀನು, ಆದರೂ ಬಿಡುಗಡೆ ಭಾಗ್ಯ ಇಲ್ಲ
2019ರಲ್ಲಿ ನಡೆದ ಜಾಮಿಯಾ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಶರ್ಜಿಲ್ ಇಮಾಮ್‌ಗೆ ದೆಹಲಿ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ನವದೆಹಲಿ: 2019ರಲ್ಲಿ ನಡೆದ ಜಾಮಿಯಾ ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಶರ್ಜಿಲ್ ಇಮಾಮ್‌ಗೆ ದೆಹಲಿ ಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅನುಜ್ ಅಗರವಾಲ್ ಅವರು ಶರ್ಜಿಲ್ ಇಮಾಮ್‌ಗೆ ಜಾಮೀನು ನೀಡಿದ್ದು,
ನ್ಯಾಯಾಲಯದ ವಿವರವಾದ ಆದೇಶಕ್ಕಾಗಿ ಕಾಯಲಾಗುತ್ತಿದೆ.
ಆದಾಗ್ಯೂ, ಜನವರಿ 2020 ರಿಂದ ನ್ಯಾಯಾಂಗ ಬಂಧನದಲ್ಲಿರುವ ಶರ್ಜಿಲ್ ಇಮಾಮ್, ದೆಹಲಿ ಗಲಭೆ ಸಂಚಿನ ಪ್ರಕರಣದಲ್ಲಿ ಇನ್ನೂ ಜಾಮೀನು ಪಡೆಯದ ಕಾರಣ ಅವರ ಜೈಲುವಾಸ ಮುಂದುವರೆಯಲಿದೆ.
ಡಿಸೆಂಬರ್ 13, 2019 ರಂದು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಇಮಾಮ್ ಅವರನ್ನು ಬಂಧಿಸಿ, ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


