ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು: ಭಟ್ಕಳ ಮೂಲದ ಉಗ್ರ ಅಬ್ದುಲ್ ವಾಹಿದ್ ಸಿದ್ಧಿಬಪ್ಪ ದೋಷಮುಕ್ತ!
2007ರಲ್ಲಿ ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಭಟ್ಕಳದ ಅಬ್ದುಲ್ ವಾಹಿದ್ ಸಿದ್ಧಿಬಪ್ಪ ಆರೋಪಗಳಿಂದ ಮುಕ್ತವಾಗಿದ್ದಾನೆ.

ಕಾರವಾರ: 2007ರಲ್ಲಿ ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಭಟ್ಕಳದ ಅಬ್ದುಲ್ ವಾಹಿದ್ ಸಿದ್ಧಿಬಪ್ಪ ಆರೋಪಗಳಿಂದ ಮುಕ್ತವಾಗಿದ್ದಾನೆ.
ಏಳು ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಈತನನ್ನು ಆರೋಪಮುಕ್ತಗೊಳಿಸಿ ದೆಹಲಿಯ ಪಟಿಯಾಲಾ ಹೌಸ್ ಸೆಷನ್ಸ್ ಕೋರ್ಟ್ ತೀರ್ಪು ನೀಡಿದೆ. ಅಬ್ದುಲ್ ವಾಹಿದ್ ಸಿದ್ದಿಬಪ್ಪ ವಿರುದ್ಧ 2007ರಿಂದ ನಿಷೇಧಿತ ಇಂಡಿಯನ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯೊಂದಿಗೆ ಸೇರಿ ದೇಶದ ವಿವಿಧೆಡೆ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪ ಕೇಳಿಬಂದಿತ್ತು.
ಈ ಸಂಬಂಧ ಅಬ್ದುಲ್ ವಾಹಿದ್ ನನ್ನು 2016ರ ಮೇ 20ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಈತ ಇಂಡಿಯನ್ ಮುಜಾಹಿದ್ದೀನ್ ಮುಖ್ಯಸ್ಥ ಯಾಸೀನ್ ಭಟ್ಕಳ್ ಸಂಬಂಧಿ ಎನ್ನಲಾಗಿದೆ.
ಇಂಡಿಯನ್ ಮುಜಾಹಿದ್ದಿನ್ ಸಂಘಟನೆಗೆ ಅಕ್ರಮ ಹಣಕಾಸು ವ್ಯವಹಾರ, ಹವಾಲಾ ದಂದೆ, ಜೊತೆಗೆ ಮುಂಬೈ ಅಟ್ಯಾಕ್, ಚಿನ್ನಸ್ವಾಮಿ ಕ್ರೀಡಾಂಗಣ ಬ್ಲಾಸ್ಟ್ನಲ್ಲಿ ಸಹ ಈತನ ಕೈವಾಡ ಇರುವ ಕುರಿತು ಎನ್ಐಎ ಪ್ರಕರಣ ದಾಖಲಿಸಿತ್ತು. ಆದರೆ ಎನ್ಐಎ ದಾಖಲಿಸಿದ್ದ ದೂರಿನಲ್ಲಿ ಸಾಕ್ಷಿ ಕೊರತೆ ಹಿನ್ನಲೆಯಲ್ಲಿ ಪ್ರಕರಣ ರದ್ದು ಮಾಡಲಾಗಿದೆ.
ಇಂದು ಅಬ್ದುಲ್ ಬಿಡುಗಡೆಯಾಗುತ್ತಿದ್ದು ಬಳಿಕ ಮುಂಬೈ ಮತ್ತು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣ ಪ್ರಕರಣದಲ್ಲಿ ಮತ್ತೊಮ್ಮೆ ಆತನನ್ನು ಎನ್ಐಎ ಬಂಧಿಸಲಿದೆ ಎನ್ನಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


