ಗೋಧ್ರಾ ಗಲಭೆ ವೇಳೆ ಮುಸ್ಲಿಮರ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ: 26 ಆರೋಪಿಗಳ ಖುಲಾಸೆ
ಇಡೀ ದೇಶವನ್ನೇ ಬೆಚ್ಚಿಬೀಳಿಸಿದ 2002ರ ಗುಜರಾತ್ ಗೋದ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಕಲೋಲ್ ಎಂಬ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ಗುಜರಾತ್ನ ನ್ಯಾಯಾಲಯ ಖುಲಾಸೆಗೊಳಿಸಿದೆ.

ಗೋಧ್ರಾ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ 2002ರ ಗುಜರಾತ್ ಗೋದ್ರಾ ಹತ್ಯಾಕಾಂಡ ಸಂದರ್ಭದಲ್ಲಿ ಕಲೋಲ್ ಎಂಬ ಪ್ರದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿ ಆರೋಪಿಗಳನ್ನು ಗುಜರಾತ್ನ ನ್ಯಾಯಾಲಯ ಖುಲಾಸೆಗೊಳಿಸಿದೆ.
ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ 39 ಆರೋಪಿಗಳ ಪೈಕಿ, 13 ಮಂದಿ ಆರೋಪಿಗಳು ಪ್ರಕರಣದ ವಿಚಾರಣೆಯ ಸಮಯದಲ್ಲಿ ಮೃತಪಟ್ಟಿದ್ದರು. ಅವರ ವಿರುದ್ಧದ ವಿಚಾರಣೆಯನ್ನು ಈ ಹಿಂದೆಯೇ ರದ್ದುಗೊಳಿಸಲಾಗಿತ್ತು.
ಇದೀಗ ಪಂಚಮಹಲ್ ಜಿಲ್ಲೆಯ ಕಲೋಲ್ನಲ್ಲಿರುವ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಲೀಲಾಭಾಯಿ ಚುಡಾಸಮಾ ಅವರು ಇನ್ನುಳಿದ 26 ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ಖುಲಾಸೆ ಮಾಡಿದ್ದಾರೆ.
ಗುಜರಾತ್ನ ಗೋದ್ರಾದಲ್ಲಿ 2002ರ ಫೆಬ್ರುವರಿ 27ರಂದು ಸಾಬರಮತಿ ರೈಲನ್ನು ಸುಟ್ಟುಹಾಕಲಾಗಿತ್ತು. ಆನಂತರ ಮಾರ್ಚ್ 1 ರಂದು ಎರಡು ಕೋಮುಗಳ ನಡುವಿನ ಕೋಮು ಗಲಭೆ ಭುಗಿಲೆದ್ದು, ಹಿಂಸಾಚಾರಗಳು ಸಂಭವಿಸಿದ್ದವು. ಪ್ರಕರಣದಲ್ಲಿ 39 ಮಂದಿ ಆರೋಪಿಗಳು ಭಾಗಿಯಾಗಿದ್ದರು.
ಕಲೋಲ್ ಪೊಲೀಸ್ ಠಾಣೆಯಲ್ಲಿ ಈ ಆರೋಪಿಗಳ ವಿರುದ್ಧ 2002ರ ಮಾರ್ಚ್ 2ರಂದು ಎಫ್ಐಆರ್ ದಾಖಲಾಗಿತ್ತು. ಪ್ರಾಸಿಕ್ಯೂಷನ್ 190 ಸಾಕ್ಷಿಗಳು ಮತ್ತು 334 ಸಾಕ್ಷ್ಯಗಳನ್ನು ಪರಿಶೀಲಿಸಿತ್ತು. ಆದರೆ, ನ್ಯಾಯಾಲಯವು ಸಾಕ್ಷಿಗಳಲ್ಲಿ ವಿರೋಧಾಭಾಸಗಳಿವೆ ಎಂದು ಅಭಿಪ್ರಾಯಪಟ್ಟಿದೆ. ಹೀಗಾಗಿ ಪ್ರಾಸಿಕ್ಯೂಷನ್ ವಾದವನ್ನು ಕೋರ್ಟ್ ತಳ್ಳಿಹಾಕಿದೆ.
2002ರ ಮಾರ್ಚ್ 1ರಂದು ಗಾಂಧಿನಗರ ಜಿಲ್ಲೆಯ ಕಲೋಲ್ ನಗರದಲ್ಲಿ ನಡೆದ ಕೋಮು ಗಲಭೆಯಲ್ಲಿ ಸುಮಾರು 2,000ಕ್ಕೂ ಹೆಚ್ಚು ಜನರು ಹರಿತವಾದ ಆಯುಧಗಳಿಂದ ಪರಸ್ಪರ ಘರ್ಷಣೆಯಲ್ಲಿ ತೊಡಗಿದ್ದರು. ಈ ವೇಳೆ ಹಲವು ಅಂಗಡಿಗಳನ್ನು ಧ್ವಂಸ ಮಾಡಿದ್ದರು.
ಮಸೀದಿಯಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯನ್ನು ಹಿಂದುತ್ವವಾದಿ ಗುಂಪೊಂದು ಆತನನ್ನು ಕೊಂದು, ದೇಹವನ್ನು ಮಸೀದಿಯೊಳಗೆ ಸುಟ್ಟು ಹಾಕಿತ್ತು. ಮತ್ತೊಂದು ಘಟನೆಯಲ್ಲಿ ಗುಂಪೊಂದು 38 ಜನರ ಮೇಲೆ ದಾಳಿ ನಡೆಸಿತ್ತು. ಈ ಪೈಕಿ 11 ಜನರನ್ನು ಜೀವಂತವಿರುವಾಗಲೇ ಸುಟ್ಟುಹಾಕಿದ ಭೀಕರ ಘಟನೆಗಳು ನಡೆದಿದ್ದವು. ಈ ಘಟನೆ ನಡೆಯುವಾಗ ತಪ್ಪಿಸಿಕೊಳ್ಳಲು ಯತ್ನಿಸಿದ ಮಹಿಳೆಯೊಬ್ಬರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


