ದೆಹಲಿಯ ಅಬಕಾರಿ ನೀತಿ ಹಗರಣದ ಮಾಸ್ಟರ್ ಮೈಂಡ್ ಮನೀಶ್ ಸಿಸೋಡಿಯಾ: ಬಿಜೆಪಿ ನಾಯಕ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬಿಜೆಪಿ ಭಾನುವಾರ ತರಾಟೆಗೆ ತೆಗೆದುಕೊಂಡಿದೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 'ಆಪಾದಿತ ಹಗರಣದ ಮಾಸ್ಟರ್ ಮೈಂಡ್' ಎಂದು ಹೇಳಿದೆ.

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷವನ್ನು (ಎಎಪಿ) ಬಿಜೆಪಿ ಭಾನುವಾರ ತರಾಟೆಗೆ ತೆಗೆದುಕೊಂಡಿದೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ 'ಆಪಾದಿತ ಹಗರಣದ ಮಾಸ್ಟರ್ ಮೈಂಡ್' ಎಂದು ಹೇಳಿದೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ಮದ್ಯ ಹಗರಣದ ಆರೋಪಿ ಮನೀಶ್ ಸಿಸೋಡಿಯಾಗೆ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದ್ದು ಏಕೆ, ಸಿಸೋಡಿಯಾ ಅವರು ಅಬಕಾರಿ ಪ್ರಕರಣದಲ್ಲಿ ಆರೋಪಿ. ಮನೀಶ್ ಸಿಸೋಡಿಯಾ ಮತ್ತು ಕಂಪನಿ 100 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಮತ್ತು ಇದನ್ನು ನ್ಯಾಯಾಲಯದ ಮೂಲಕ ಪರಿಶೀಲಿಸಲಾಗಿದೆ ಎಂದರು.
ಪ್ರಸ್ತುತಪಡಿಸಿದ ಸಾಕ್ಷ್ಯಗಳನ್ನು ಪರಿಶೀಲಿಸುವಾಗ, ಮನೀಶ್ ಸಿಸೋಡಿಯಾ ಪ್ರಾಮಾಣಿಕರಲ್ಲ. ಆದರೆ, ಈ ಭ್ರಷ್ಟಾಚಾರ ನೀತಿಯ ಮಾಸ್ಟರ್‌ಮೈಂಡ್ ಎಂದು ಹೇಳಬಹುದು ಎಂದು ನ್ಯಾಯಾಲಯ ಹೇಳಿದೆ ಎಂದು ಪೂನಾವಾಲಾ ಹೇಳಿದರು.
ಶುಕ್ರವಾರ, ದೆಹಲಿ ನ್ಯಾಯಾಲಯವು ಸಿಬಿಐ ಸಲ್ಲಿಸಿದ ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತು ಮತ್ತು ಈ ವಿಚಾರದಲ್ಲಿ ಪ್ರಾಥಮಿಕವಾಗಿ ಎಎಪಿ ನಾಯಕ ಕ್ರಿಮಿನಲ್ ಪಿತೂರಿಯ ವಾಸ್ತುಶಿಲ್ಪಿ ಎಂದು ಹೇಳಿದೆ.
ವಿಶೇಷ ನ್ಯಾಯಾಧೀಶ ಎಂ.ಕೆ. ನಾಗ್ಪಾಲ್ ಅವರು, ಸಿಸೋಡಿಯಾ ಅವರ ಬಿಡುಗಡೆಯು ಈಗ ನಡೆಯುತ್ತಿರುವ ತನಿಖೆ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು ಮತ್ತು ಅದರ ಪ್ರಗತಿಗೆ ಅಡ್ಡಿಪಡಿಸಬಹುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


