ದೇಶ

ಸೂರತ್ ಕೋರ್ಟ್ ನಲ್ಲಿ ನಾಳೆ ಜೈಲು ಶಿಕ್ಷೆ ವಿರುದ್ಧ ಮೇಲ್ಮನವಿ: ಸೋನಿಯಾ ಭೇಟಿಯಾದ ರಾಹುಲ್

ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಾಳೆ ಸೂರತ್ ಕೋರ್ಟ್‌ಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ.

ಸೂರತ್ ಕೋರ್ಟ್ ನಲ್ಲಿ ನಾಳೆ ಜೈಲು ಶಿಕ್ಷೆ ವಿರುದ್ಧ ಮೇಲ್ಮನವಿ: ಸೋನಿಯಾ ಭೇಟಿಯಾದ ರಾಹುಲ್
ಸೋನಿಯಾ, ರಾಹುಲ್ ಗಾಂಧಿ ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ನಾಳೆ ಸೂರತ್ ಕೋರ್ಟ್‌ಗೆ ಹಾಜರಾಗಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತಮ್ಮ ತಾಯಿ ಮತ್ತು ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ರಾಷ್ಟ್ರ ರಾಜಧಾನಿಯ ಹೋಟೆಲ್‌ವೊಂದರಲ್ಲಿ ಸೋನಿಯಾ ಗಾಂಧಿ ಅವರನ್ನು ರಾಹುಲ್ ಭೇಟಿಯಾಗಿದ್ದು, ಸುಮಾರು ಒಂದೂವರೆ ತಾಸುಗಳ ಕಾಲ ಮಾತುಕತೆ ನಡೆಸಿದ್ದಾರೆ.  ಈ ಸಂದರ್ಭದಲ್ಲಿ  ಅವರ ಸೋದರ ಮಾವ ರಾಬರ್ಟ್ ವಾದ್ರಾ ಕೂಡ ಇದ್ದರು.

ಪ್ರಧಾನಿ ಮೋದಿ ವಿರುದ್ಧದ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷಗಳ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸಲು ರಾಹುಲ್ ಗಾಂಧಿ ನಾಳೆ ಗುಜರಾತ್ ನ ಸೂರತ್ ಗೆ ಪ್ರಯಾಣಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ರಾಹುಲ್ ಗಾಂಧಿ ಕ್ರಿಮಿನಲ್ ಮಾನನಷ್ಟ ಪ್ರಕರಣದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ, ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ. 

ಮೋದಿ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆಗೆ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ,  ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ದಾಖಲಿಸಿರುವ ಮತ್ತೊಂದು ಮಾನನಷ್ಟ ಮೊಕದ್ದಮೆಯನ್ನು ಗಾಂಧಿ ಎದುರಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಏಪ್ರಿಲ್ 12 ರಂದು ತನ್ನ ಮುಂದೆ ಹಾಜರಾಗುವಂತೆ ಪಾಟ್ನಾ ನ್ಯಾಯಾಲಯವು ಕಾಂಗ್ರೆಸ್ ನಾಯಕನಿಗೆ ಸೂಚಿಸಿದೆ ಎಂದು ವರದಿಯಾಗಿದೆ.

ರಾಹುಲ್ ಲೋಕಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿದ ನಂತರ ಕಾಂಗ್ರೆಸ್ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸುತ್ತಿದೆ. ರಾಹುಲ್ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್  ಸಮಾನ ಮನಸ್ಕ ವಿಪಕ್ಷಗಳನ್ನು ಒಟ್ಟುಗೂಡಿಸುವ ಪ್ರಯತ್ನ ಮಾಡುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.