ಮೂವರು ಯೋಧರಿಂದ ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ; ಇಬ್ಬರ ಬಂಧನ
ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್‌ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಝಾನ್ಸಿ: ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಸೇನೆಯ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಇಬ್ಬರು ಮಹಿಳೆಯರು ಉತ್ತರ ಪ್ರದೇಶದ ಝಾನ್ಸಿಯ ಜಿಆರ್‌ಪಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಝಾನ್ಸಿ ರೈಲು ನಿಲ್ದಾಣದಲ್ಲಿ ನಿಲ್ಲಿಸಿದ್ದ ಸ್ಟೇಷನರಿ ಕೋಚ್‌ನಲ್ಲಿ ಮೂವರು ಯೋಧರು ತಮ್ಮ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ.
ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಇಬ್ಬರು ಯೋಧರನ್ನು ಬಂಧಿಸಿದ್ದು, ಮತ್ತೊಬ್ಬ ಯೋಧ ತಲೆಮರೆಸಿಕೊಂಡಿದ್ದಾರೆ.
ಯೋಧರು ತಾವು ಫೋನ್ ಕಳೆದುಕೊಂಡಿದ್ದಾಗೆ ಹೇಳಿಕೊಂಡು ಮಹಿಳೆಯರ ಮೊಬೈಲ್ ಕೇಳಿದ್ದಾರೆ. ನಂತರ ಆ ಮಹಿಳೆಯರನ್ನು ಪ್ಲಾಟ್‌ಫಾರ್ಮ್ 7 ರಲ್ಲಿ ನಿಲ್ಲಿಸಿದ್ದ ರೈಲ್ವೆ ಕೋಚ್‌ಗೆ ಕರೆದೊಯ್ದು ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಜಿಆರ್‌ಪಿ ಸರ್ಕಲ್ ಅಧಿಕಾರಿ ಮೊಹಮ್ಮದ್ ನಯೀಮ್ ಅನ್ಸಾರಿ ತಿಳಿಸಿದ್ದಾರೆ.
ಜವಾನರಾದ ಸಂದೀಪ್, ರವೀಂದ್ರ ಮತ್ತು ಸುರೇಶ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಅವರಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಜಿಆರ್‌ಪಿ ಠಾಣೆಯ ಪೊಲೀಸ್ ಅಧಿಕಾರಿಗಳು ರೈಲ್ವೆ ಕೋಚ್ ಅನ್ನು ಪರಿಶೀಲಿಸಿದ್ದಾರೆ ಮತ್ತು ಘಟನೆಯ ಬಗ್ಗೆ ಭಾರತೀಯ ಸೇನೆಗೆ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


