ಗಾಜಿಯಾಬಾದ್: ಆತ್ಮಹತ್ಯೆಗೂ ಮುನ್ನ ತನ್ನ ಗೆಳತಿಗೆ ಗುಂಡಿಕ್ಕಿ ಕೊಂದ ಯುವಕ
ಜಿಲ್ಲೆಯ ನಂದಗ್ರಾಮದಲ್ಲಿ 26 ವರ್ಷದ ಯುವಕನೊಬ್ಬ ತನ್ನ ಗೆಳತಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಜಿಯಾಬಾದ್(ಉತ್ತರಪ್ರದೇಶ): ಜಿಲ್ಲೆಯ ನಂದಗ್ರಾಮದಲ್ಲಿ 26 ವರ್ಷದ ಯುವಕನೊಬ್ಬ ತನ್ನ ಗೆಳತಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಂದಗ್ರಾಮ್ ಪೊಲೀಸ್ ಠಾಣಾ ವ್ಯಾಪ್ತಿಯ ಘುಖಾನಾ ಗ್ರಾಮದ 24 ವರ್ಷದ ದೀಪಮಲಾ ಯಾದವ್ ಎಂಬುವರ ಮನೆಗೆ ಬೆಳಗ್ಗೆ ರಾಹುಲ್ ಚೌಧರಿ ಬಂದು ಪಿಸ್ತೂಲಿನಿಂದ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ವೇಳೆ ದೀಪಮಾಳ ಪೋಷಕರು ದೇವಸ್ಥಾನಕ್ಕೆ ಹೋಗಿದ್ದರು ಎಂದು ತಿಳಿಸಿದರು.
ನಂತರ ಚೌಧರಿ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವಿಷ ಸೇವಿಸಿದ್ದಾನೆ ಎಂದು ಉಪ ಪೊಲೀಸ್ ಆಯುಕ್ತ (ನಗರ) ನಿಪುನ್ ಅಗರ್ವಾಲ್ ಹೇಳಿದ್ದಾರೆ.
ನೆರೆಹೊರೆಯವರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ಯುವತಿ ಸಾವನ್ನಪ್ಪಿದ್ದಾಳೆ ಎಂದು ಘೋಷಿಸಿದರು.
ಜಿಲ್ಲಾ ಸರ್ಕಾರಿ ಆಸ್ಪತ್ರೆಯು ಚೌಧರಿ ಅನ್ನು ಈಶಾನ್ಯ ದೆಹಲಿಯ ಜಿಟಿಬಿ ಆಸ್ಪತ್ರೆಗೆ ರವಾನಿಸಿದರು. ಆದರೆ ಅಲ್ಲಿ ಆತ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಗರ್ವಾಲ್ ಹೇಳಿದರು.
ಬುಲಂದ್‌ಶಹರ್ ಜಿಲ್ಲೆಯ ಸೇಲಂಪುರ್ ನಿವಾಸಿಯಾದ ರಾಹುಲ್ ಎಂಬಾತ ತನ್ನ ಹಳ್ಳಿಯಲ್ಲಿ ಯುವತಿಯನ್ನು ಭೇಟಿಯಾಗುತ್ತಿದ್ದನು. ತನ್ನ ತಾಯಿಯ ಚಿಕ್ಕಪ್ಪನ ಮನೆಗೆ ಯುವತಿ ಹೋಗುತ್ತಿದ್ದಳು. ಈ ಇಬ್ಬರೂ ಪರಸ್ಪರ ಮಾತನಾಡಲು ಪ್ರಾರಂಭಿಸಿದರು. ನಂತರ ದೀಪಮಾಲಾಳನ್ನು ಮದುವೆಯಾಗುವಂತೆ ರಾಹುಲ್ ಒತ್ತಾಯಿಸಿದ್ದು ಇದಕ್ಕೆ ದೀಪಮಾಲ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


