ದೇಶ

ನಿವೃತ್ತ ಹಾಗೂ ಸೇವೆಯಲ್ಲಿರುವ ನ್ಯಾಯಧೀಶರ ವಿರುದ್ಧ ಸರ್ಕಾರವು ಕಾಲಕಾಲಕ್ಕೆ ದೂರನ್ನು ಸ್ವೀಕರಿಸುತ್ತದೆ: ಕಿರಣ್ ರಿಜಿಜು

ಕಾನೂನು ಸಚಿವಾಲಯವು ಕಾಲಕಾಲಕ್ಕೆ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ದೂರುಗಳನ್ನು ಸ್ವೀಕರಿಸುತ್ತದೆ. ಆದರೆ ಇದು ಉನ್ನತ ನ್ಯಾಯಾಂಗದ ಸದಸ್ಯರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಮಾತ್ರ ಸಂಬಂಧಿಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಗೆ ತಿಳಿಸಿದರು.

ನಿವೃತ್ತ ಹಾಗೂ ಸೇವೆಯಲ್ಲಿರುವ ನ್ಯಾಯಧೀಶರ ವಿರುದ್ಧ ಸರ್ಕಾರವು ಕಾಲಕಾಲಕ್ಕೆ ದೂರನ್ನು ಸ್ವೀಕರಿಸುತ್ತದೆ: ಕಿರಣ್ ರಿಜಿಜು
ಕಿರಣ್ ರಿಜಿಜು
Published On :

ನವದೆಹಲಿ: ಕಾನೂನು ಸಚಿವಾಲಯವು ಕಾಲಕಾಲಕ್ಕೆ ಸೇವೆ ಸಲ್ಲಿಸುತ್ತಿರುವ ಮತ್ತು ನಿವೃತ್ತ ನ್ಯಾಯಮೂರ್ತಿಗಳ ಬಗ್ಗೆ ದೂರುಗಳನ್ನು ಸ್ವೀಕರಿಸುತ್ತದೆ. ಆದರೆ ಇದು ಉನ್ನತ ನ್ಯಾಯಾಂಗದ ಸದಸ್ಯರ ನೇಮಕಾತಿ ಮತ್ತು ಸೇವಾ ಷರತ್ತುಗಳಿಗೆ ಮಾತ್ರ ಸಂಬಂಧಿಸಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಗುರುವಾರ ರಾಜ್ಯಸಭೆಗೆ ತಿಳಿಸಿದರು.

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರ ಪ್ರಕಾರ ಸುಪ್ರೀಂ ಕೋರ್ಟ್‌ನ ಕೆಲವು ಮಾಜಿ ನ್ಯಾಯಾಧೀಶರು ಭಾರತ ವಿರೋಧಿ ಗ್ಯಾಂಗ್‌ನ ಭಾಗವಾಗಿದ್ದಾರೆಯೇ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. ಮಾಹಿತಿಯ ಮೂಲವನ್ನು ಬಹಿರಂಗಪಡಿಸಲು ಮತ್ತು ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಕೇಂದ್ರ ಗೃಹ ಸಚಿವಾಲಯಕ್ಕೆ ಸರ್ಕಾರವು ಮಾಹಿತಿ ನೀಡಿದೆಯೇ ಎಂಬುದನ್ನು ಬಹಿರಂಗಪಡಿಸಲು ಸಚಿವರನ್ನು ಕೇಳಲಾಯಿತು.

ಲಿಖಿತ ಉತ್ತರದಲ್ಲಿ ರಿಜಿಜು ನಾಲ್ಕು ಉಪ ಪ್ರಶ್ನೆಗಳಿಗೆ ನೇರ ಉತ್ತರವನ್ನು ನೀಡದಿದ್ದರೂ, ಹಿಂದಿ ಆವೃತ್ತಿಯಲ್ಲಿ ಅವರು ನಕಾರಾತ್ಮಕವಾಗಿ ಉತ್ತರಿಸಿದ್ದಾರೆ. ಎ ಇಂದ ಡಿ ಉಪ ಪ್ರಶ್ನೆಗಳಿಗೆ ಅವರು "ಇಲ್ಲ" ಎಂದು ಉತ್ತರಿಸಿದರು.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳ ನಿವೃತ್ತ ನ್ಯಾಯಮೂರ್ತಿಗಳಿಗೆ ಸಂಬಂಧಿಸಿದ ದೂರುಗಳನ್ನು ನ್ಯಾಯಾಂಗ ಇಲಾಖೆಯು ನಿರ್ವಹಿಸುವುದಿಲ್ಲ ಎಂದು ಅವರು ಹೇಳಿದರು.

ಉನ್ನತ ನ್ಯಾಯಾಂಗದಲ್ಲಿ ಉತ್ತರದಾಯಿತ್ವವನ್ನು 'ಇನ್-ಹೌಸ್ ಮೆಕ್ಯಾನಿಸಂ' ಮೂಲಕ ನಿರ್ವಹಿಸಲಾಗುತ್ತದೆ ಎಂದು ಅವರು ನೆನಪಿಸಿಕೊಂಡರು. 1997ರ ಮೇ 7ರಂದು ಸುಪ್ರೀಂ ಕೋರ್ಟ್ ತನ್ನ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಎರಡು ನಿರ್ಣಯಗಳನ್ನು ಅಂಗೀಕರಿಸಿತು. ಒಂದು ನ್ಯಾಯಾಂಗ ಜೀವನದ ಮೌಲ್ಯಗಳು ಪುನಃಸ್ಥಾಪನೆ ಮತ್ತು ಎರಡನೆಯದು ನ್ಯಾಯಾಂಗ ಜೀವನದ ಸಾರ್ವತ್ರಿಕವಾಗಿ ಅಂಗೀಕರಿಸಲ್ಪಟ್ಟ ಮೌಲ್ಯಗಳಿಗೆ ಬದ್ಧವಾಗಿರದ ನ್ಯಾಯಾಧೀಶರ ವಿರುದ್ಧ ಸೂಕ್ತ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುವ ಆಂತರಿಕ ಪ್ರಕ್ರಿಯೆ ಎಂದು ಹೇಳಿದರು. 

ಉನ್ನತ ನ್ಯಾಯಾಂಗಕ್ಕಾಗಿ ಸ್ಥಾಪಿಸಲಾದ "ಇನ್-ಹೌಸ್ ಮೆಕ್ಯಾನಿಸಂ" ಗೆ ಅನುಗುಣವಾಗಿ, ಭಾರತದ ಮುಖ್ಯ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರು ಮತ್ತು ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಮೂರ್ತಿಗಳ ನಡವಳಿಕೆಯ ವಿರುದ್ಧ ದೂರುಗಳನ್ನು ಸ್ವೀಕರಿಸಲು ಸಮರ್ಥರಾಗಿದ್ದಾರೆ. ಅದೇ ರೀತಿ, ಹೈಕೋರ್ಟ್ ನ್ಯಾಯಾಧೀಶರ ನಡವಳಿಕೆಯ ವಿರುದ್ಧ ದೂರುಗಳನ್ನು ಸ್ವೀಕರಿಸಲು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಸಮರ್ಥರಾಗಿದ್ದಾರೆ.

"ನ್ಯಾಯಾಂಗ ಇಲಾಖೆಯು ಸ್ವೀಕರಿಸಿದ ದೂರುಗಳನ್ನು ಸೂಕ್ತ ಕ್ರಮಕ್ಕಾಗಿ ಭಾರತದ ಮುಖ್ಯ ನ್ಯಾಯಾಧೀಶರು ಅಥವಾ ಸಂಬಂಧಪಟ್ಟ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳಿಗೆ ರವಾನಿಸಲಾಗುತ್ತದೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.