ಗ್ರೇಟರ್ ನೋಯ್ಡಾದಲ್ಲಿ 8ನೇ ಮಹಡಿಯಿಂದ ಬಿದ್ದು ಜಾಂಬಿಯಾ ವಿದ್ಯಾರ್ಥಿ ಸಾವು
ಶಾರದಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಗ್ರೇಟರ್ ನೋಯ್ಡಾದ ವಸತಿ ಕಟ್ಟಡದ ಎಂಟನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ಗ್ರೇಟರ್ ನೋಯ್ಡಾ: ಶಾರದಾ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಗ್ರೇಟರ್ ನೋಯ್ಡಾದ ವಸತಿ ಕಟ್ಟಡದ ಎಂಟನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು ಮಮಾಬಾ ಎಂ ಬ್ವಾಲಿಯಾ ಎಂದು ಗುರುತಿಸಲಾಗಿದೆ. 20 ವರ್ಷದ ಈ ವಿದ್ಯಾರ್ಥಿ ಜಾಂಬಿಯಾ ಮೂಲದವರಾಗಿದ್ದು, ಗ್ರೇಟರ್ ನೋಯ್ಡಾದ ಶಾರದಾ ವಿಶ್ವವಿದ್ಯಾಲಯದಲ್ಲಿ ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್(ಬಿಬಿಎ) ಓದುತ್ತಿದ್ದರು ಎಂದು ಅವರು ಹೇಳಿದ್ದಾರೆ.
"ಗ್ರೇಟರ್ ನೋಯ್ಡಾದ ಸೆಕ್ಟರ್ 151ರ ಸಮೀಪದ ಜೇಪಿ ಅಮನ್ ಸೊಸೈಟಿಯಲ್ಲಿ ಬುಧವಾರ ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯು ತನ್ನ ಫ್ಲಾಟ್‌ನ ಬಾಲ್ಕನಿಯಿಂದ ಬಿದ್ದು, ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ" ಎಂದು ಪೊಲೀಸರು ತಿಳಿಸಿದ್ದಾರೆ.
ಬ್ವಾಲಿಯಾ ತನ್ನ ಇಬ್ಬರು ಜಾಂಬಿಯಾ ಸ್ನೇಹಿತರ ಜೊತೆಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದರು.
ಘಟನೆಯ ನಂತರ ತಕ್ಷಣವೇ ಬ್ವಾಲಿಯಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ನಾಲೆಡ್ಜ್ ಪಾರ್ಕ್ ಪೊಲೀಸ್ ಠಾಣೆಯ ಉಸ್ತುವಾರಿ ವಿನೋದ್ ಕುಮಾರ್ ಹೇಳಿದ್ದಾರೆ.
ಘಟನೆಯ ಕುರಿತು ಪೊಲೀಸರು ಜಾಂಬಿಯಾ ರಾಯಭಾರ ಕಚೇರಿ ಮತ್ತು ಬ್ವಾಲಿಯಾ ಪೋಷಕರಿಗೆ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


