ದೇಶ

ಸೂಕ್ಷ್ಮ ಪ್ರದೇಶಗಳಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ಭೇಟಿ; ಶಾಂತಿ, ಸೌಹಾರ್ದತೆಗೆ ಕರೆ

ಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಕೋಲ್ಕತ್ತಾದ ಕೆಲವು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಸೂಕ್ಷ್ಮ ಪ್ರದೇಶಗಳಿಗೆ ಪಶ್ಚಿಮ ಬಂಗಾಳ ರಾಜ್ಯಪಾಲ ಆನಂದ್ ಬೋಸ್ ಭೇಟಿ; ಶಾಂತಿ, ಸೌಹಾರ್ದತೆಗೆ ಕರೆ
ರಾಜ್ಯಪಾಲ ಆನಂದ್ ಬೋಸ್
Published On :

ಕೋಲ್ಕತ್ತಾ: ಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಕೋಲ್ಕತ್ತಾದ ಕೆಲವು ಸೂಕ್ಷ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ.

ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಪ್ರದೇಶದಿಂದ ಹಿಡಿದು ಬಂಗಾಳೇತರ ಭದ್ರಕೋಟೆ ಎಂದು ಕರೆಯಲಾಗುವ ಪ್ರದೇಶಕ್ಕೂ ರಾಜ್ಯಪಾಲರು ಭೇಟಿ ನೀಡಿ, ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಸ್ಥಳೀಯರು, ಮಕ್ಕಳು, ರಸ್ತೆ ಬದಿಯ ಅಂಗಡಿಗಳ ಮಾಲೀಕರು ಮತ್ತು ಭದ್ರತಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು.

ರಾಜ್ಯಪಾಲರು ಮೊದಲು ಲೇಕ್ ಟೌನ್‌ನಲ್ಲಿರುವ ಬಾಲ ಹನುಮಾನ್ ದೇವಸ್ಥಾನಕ್ಕೆ ಭೇಟಿ ನೀಡಿದರು, ನಂತರ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ಇಕ್ಬಾಲ್‌ಪೋರ್ ಪ್ರದೇಶಕ್ಕೆ ಭೇಟಿ ನೀಡಿ, ಸ್ಥಳೀಯರೊಂದಿಗೆ ಸಂವಾದ ನಡೆಸಿದರು.

ಈ ವೇಳೆ ಸೌಹಾರ್ದತೆಯ ಸಂದೇಶ ಸಾರಿದ ಬೋಸ್, ''ಈಶ್ವರ ಅಲ್ಲಾ ತೇರೇ ನಾಮ್, ಸಬ್ಕೋ ಸನ್ಮತಿ ದೇ ಭಗವಾನ್ ಎಂದು ಬೋಸ್ ಹೇಳಿದ್ದಾರೆ.

ಇತ್ತೀಚೆಗೆ ಹೌರಾ ಮತ್ತು ಹೂಗ್ಲಿಯಲ್ಲಿ ರಾಮ ನವಮಿ ಮೆರವಣಿಗೆಯಲ್ಲಿ ಎರಡು ಗುಂಪುಗಳ ನಡುವೆ ಕೋಮು ವೈಷಮ್ಯ ಮತ್ತು ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.