'ಪ್ರಧಾನಿ ಮೋದಿ ಶೈಕ್ಷಣಿಕ ಅರ್ಹತೆಯ ಕೊರತೆ ದೇಶಕ್ಕೇ ಅಪಾಯಕಾರಿ': ಜೈಲಿನಿಂದಲೇ ಪತ್ರ ಬರೆದ ಸಿಸೋಡಿಯಾ!
ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ ಎಂದು ದೆಹಲಿಯ ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ ಅಪಾಯಕಾರಿ ಎಂದು ದೆಹಲಿಯ ಮಾಜಿ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಹೇಳಿದ್ದಾರೆ.
ಅಬಕಾರಿ ನೀತಿ ತಿದ್ದುಪಡಿ ಹಗರಣದಲ್ಲಿ ವಿಚಾರಣಾ ಕೈದಿಯಾಗಿ ತಿಹಾರ್ ಜೈಲಿನಲ್ಲಿರುವ ಸಿಸೋಡಿಯಾ ಜೈಲಿನಿಂದಲೇ ದೇಶದ ಪ್ರಜೆಗಳನ್ನು ಉದ್ದೇಶಿಸಿ ಪತ್ರ ಬರೆದಿರುವ ಸಿಸೋಡಿಯಾ ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕೊರತೆಯು ದೇಶಕ್ಕೆ 'ಅಪಾಯಕಾರಿ' ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮನೀಶ್ ಸಿಸೋಡಿಯಾ ಜೈಲಿನಿಂದ ದೇಶವನ್ನುದ್ದೇಶಿಸಿ ಬರೆದಿರುವ ಪತ್ರವನ್ನು ಟ್ವೀಟ್ ಮಾಡಿದ್ದು "ಪ್ರಧಾನಿ ಕಡಿಮೆ ಶಿಕ್ಷಣ ಪಡೆದರೆ ಅದು ದೇಶಕ್ಕೆ ತುಂಬಾ ಅಪಾಯಕಾರಿ. ನರೇಂದ್ರ ಮೋದಿಗೆ ವಿಜ್ಞಾನ ಅರ್ಥವಾಗುತ್ತಿಲ್ಲ... ಮೋದಿಯವರಿಗೆ ಶಿಕ್ಷಣದ ಮಹತ್ವ ಅರ್ಥವಾಗುತ್ತಿಲ್ಲ" ಎಂದು ಪತ್ರದಲ್ಲಿ ಸಿಸೋಡಿಯಾ ಪ್ರತಿಪಾದಿಸಿದ್ದು, ಕಳೆದ ಕೆಲವು ವರ್ಷಗಳಲ್ಲಿ ದೇಶದಲ್ಲಿ 60,000 ಶಾಲೆಗಳನ್ನು ಮುಚ್ಚಲಾಗಿದೆ ಎಂದು ಆರೋಪಿಸಿದ್ದಾರೆ.
ಅಂತೆಯೇ ಭಾರತದ ಪ್ರಗತಿಗೆ ಒಬ್ಬ ವಿದ್ಯಾವಂತ ಪ್ರಧಾನಿ ಇರುವುದು ಅಗತ್ಯ’’ ಎಂದು ಸಿಸೋಡಿಯ ಪತ್ರದಲ್ಲಿ ಬರೆದಿದ್ದಾರೆ.
ಈಗ ರದ್ದಾಗಿರುವ ದಿಲ್ಲಿ ಅಬಕಾರಿ ನೀತಿ 2021-22 ರ ರಚನೆ ಹಾಗೂ ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ಫೆಬ್ರವರಿ 26 ರಂದು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


