ದೇಶ

ತೀವ್ರ ಜ್ವರ, ನಿಶ್ಯಕ್ತಿಯಿಂದ ಬಳಲುತ್ತಿರುವ ನಟಿ ಖುಷ್ಬೂ ಸುಂದರ್, ಹೈದರಾಬಾದಿನ ಆಸ್ಪತ್ರೆಗೆ ದಾಖಲು

ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.

ತೀವ್ರ ಜ್ವರ, ನಿಶ್ಯಕ್ತಿಯಿಂದ ಬಳಲುತ್ತಿರುವ ನಟಿ ಖುಷ್ಬೂ ಸುಂದರ್, ಹೈದರಾಬಾದಿನ ಆಸ್ಪತ್ರೆಗೆ ದಾಖಲು
ಖುಷ್ಬೂ ಸುಂದರ್
Published On :

ಹೈದರಾಬಾದ್: ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್‌ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಶುಕ್ರವಾರ ತಿಳಿಸಿದ್ದಾರೆ.

ರಜನಿಕಾಂತ್ ಮತ್ತು ಪವನ್ ಕಲ್ಯಾಣ ಅವರಂತಹ ಟಾಪ್ ನಟರ ಜೊತೆ ನಟಿಸಿದ್ದ ಖುಷ್ಬೂ ಸುಂದರ್ ಚಿತ್ರರಂಗದಲ್ಲಿ ಭಾರಿ ಹೆಸರು ಮಾಡಿದ್ದಾರೆ. ಅವರ ಆಕರ್ಷಕ ನೋಟ ಮತ್ತು ಪ್ರಾಮಾಣಿಕ ಅಭಿನಯದಿಂದಾಗಿ ಅನೇಕರು ಅವರನ್ನು ಪ್ರೀತಿಸುತ್ತಾರೆ. ನಟನೆಯಿಂದ ರಾಜಕೀಯಕ್ಕೆ ಪ್ರವೇಶಿಸಿರುವ ಖುಷ್ಬೂ ಅವರು ಅಲ್ಲೂ ಯಶಸ್ಸನ್ನು ಕಂಡವರು ಎಂದರೆ ತಪ್ಪಾಗಲಾರದು.

ಜ್ವರ, ದೇಹದ ನೋವು ಮತ್ತು ನಿಶ್ಯಕ್ತಿಯಿಂದ ಆಸ್ಪತ್ರೆಗೆ ದಾಖಲಾಗಿರುವುದಾಗಿ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ. ಖುಷ್ಬೂ ಅವರು ಆಸ್ಪತ್ರೆಯ ಫೋಟೊಗಳನ್ನು ಸಹ ಹಂಚಿಕೊಂಡಿದ್ದಾರೆ ಮತ್ತು ಆರೋಗ್ಯದ ಬಗ್ಗೆ ಯಾವುದೇ ಎಚ್ಚರಿಕೆ ಚಿಹ್ನೆಗಳನ್ನು ನಿರ್ಲಕ್ಷ್ಯಿಸದಂತೆ ಅಭಿಮಾನಿಗಳಿಗೆ ಸಲಹೆ ನೀಡಿದ್ದಾರೆ.

ಖುಷ್ಬೂ ಸುಂದರ್ ಅವರು ಶುಕ್ರವಾರ ಈ ಸುದ್ದಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ತಮ್ಮ ಆರೋಗ್ಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಯಾವುದೇ ರೀತಿಯಲ್ಲೂ ನಿರ್ಲಕ್ಷ್ಯ ವಹಿಸಬಾರದು ಎಂದಿದ್ದಾರೆ.

'ಜ್ವರ ತುಂಬಾ ಕೆಟ್ಟದಾಗಿದೆ. ಅದು ನನ್ನ ಮೇಲೆ ಪರಿಣಾಮ ಬೀರಿದೆ. ಅತಿ ಹೆಚ್ಚು ಜ್ವರ, ಕೊಲ್ಲುವಂತ ದೇಹದ ನೋವು ಮತ್ತು ನಿಶ್ಯಕ್ತಿಯಿಂದಾಗಿ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಅದೃಷ್ಟವಶಾತ್, ಹೈದರಾಬಾದಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಇಲ್ಲಿ ಉತ್ತಮ ಆರೈಕೆ ಸಿಗುತ್ತಿದೆ. ಆರೋಗ್ಯದ ಕುರಿತಾಗಿ ನಿಮ್ಮ ದೇಹವು ನೀಡುವ ಯಾವುದೇ ಚಿಹ್ನೆಗಳನ್ನು ನಿರ್ಲಕ್ಷಿಸಬೇಡಿ. ಚೇತರಿಕೆಯ ಹಾದಿಯಲ್ಲಿದ್ದೇನೆ. ಆದರೆ, ಬಹಳ ದೂರ ಹೋಗಬೇಕಾಗಿದೆ' ಎಂದು ಖುಷ್ಬೂ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.