ದೇಶ

ಚೆನ್ನೈ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ

ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು(ಹಂತ-1) ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ಚೆನ್ನೈ ವಿಮಾನ ನಿಲ್ದಾಣದ ನೂತನ ಟರ್ಮಿನಲ್ ಕಟ್ಟಡ ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಅವರು ಗಾಂಧಿ ಪ್ರಯಾಣ ಎಂಬ ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು
Published On :

ಚೆನ್ನೈ: ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು(ಹಂತ-1) ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.

ರಾಜ್ಯದ ಶ್ರೀಮಂತ ಸಂಸ್ಕೃತಿ ಮತ್ತು ಪರಂಪರೆಯನ್ನು ಪ್ರದರ್ಶಿಸಲು ಹೊಸ ಇಂಟಿಗ್ರೇಟೆಡ್ ಟರ್ಮಿನಲ್ ಕಟ್ಟಡವನ್ನು ಅನನ್ಯವಾಗಿ ವಿನ್ಯಾಸಗೊಳಿಸಲಾಗಿದೆ.

ಸುಮಾರು 2,20,972 ಚ.ಮೀ ವಿಸ್ತೀರ್ಣ ಹೊಂದಿರುವ ಈ ಟರ್ಮಿನಲ್‌ ಚೆನ್ನೈ ವಿಮಾನ ನಿಲ್ದಾಣದ ಪ್ರಯಾಣಿಕ ದಟ್ಟಣೆ ಮತ್ತು ಏರ್‌ ಟ್ರಾಫಿಕ್‌ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಈಗ ನಿರ್ಮಾಣವಾದ ಟಿ-2 ಮೂಲಕ ಚೆನ್ನೈ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ವರ್ಷಕ್ಕೆ 23 ಮಿಲಿಯನ್‌ನಿಂದ 30 ಮಿಲಿಯನ್‌ಗೆ ಹೆಚ್ಚಿಸಬಹುದಾಗಿದೆ.

ಹೊಸ ವಿಮಾನ ನಿಲ್ದಾಣದ ನೆಲ ಮಹಡಿಯಲ್ಲಿ ರಂಗೋಲಿಯಂಥ ವಿನ್ಯಾಸಗಳನ್ನು ನೆಲದ ಮೇಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬಿಡಿಸಲಾಗಿದೆ. ಹೊಸ ಟರ್ಮಿನಲ್ ಸ್ಥಳೀಯ ತಮಿಳು ಸಂಸ್ಕೃತಿಯ ಪ್ರತಿಬಿಂಬವಾಗಿದೆ. ಉದಾಹರಣೆಗೆ ಕೋಲಂ, ಸೀರೆ, ದೇವಾಲಯಗಳು ಮತ್ತು ಇತರ ಅಂಶಗಳು ನೈಸರ್ಗಿಕ ಪರಿಸರವನ್ನು ಎತ್ತಿ ತೋರಿಸುತ್ತವೆ" ಎಂದು ಸರ್ಕಾರ ಹೇಳಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ, ತಮಿಳುನಾಡು ರಾಜ್ಯಪಾಲ ಆರ್ ಎನ್ ರವಿ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.