ಸುಖೋಯ್-30 ಯುದ್ಧ ವಿಮಾನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾರಾಟ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು.

ತೇಜ್‌ಪುರ್ (ಅಸ್ಸಾಂ): ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ (ಏ.8) ಅಸ್ಸಾಂನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಯುದ್ಧ ವಿಮಾನದಲ್ಲಿ ಮೊದಲ ಬಾರಿಗೆ ಹಾರಾಟ ನಡೆಸಿದರು.
3 ದಿನಗಳ ಅಸ್ಸಾಂ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಇಂದು ಸುಖೋಯ್ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಕುರಿತ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಮುರ್ಮು ಅವರು ಏ.6ರಂದು ಅಸ್ಸಾಂಗೆ ಭೇಟಿ ನೀಡಿದ್ದು, ನಿನ್ನೆಯಷ್ಟೇ ಕಾಜಿರಂಗ ರಾಷ್ಟ್ರೀಯ ಉದ್ಯಾನವನದಲ್ಲಿ ಗಜ ಉತ್ಸವ-2023 ಅನ್ನು ಉದ್ಘಾಟಿಸಿ ಮಾತನಾಡಿದ್ದರು.
ದ್ರೌಪದಿ ಮುರ್ಮು ಅವರು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ 2ನೇ ರಾಷ್ಟ್ರಪತಿಯಾಗಿದ್ದಾರೆ. 2009ರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಸುಖೋಯ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


