ಎನ್‌ಸಿಪಿಯಲ್ಲಿ ಏಕನಾಥ್ ಶಿಂಧೆ ಆಗ್ತಾರಾ ಅಜಿತ್ ಪವಾರ್?
ಶಿವಸೇನೆಯನ್ನು ಇಬ್ಭಾಗ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ನೇತೃತ್ವದ ಶಿವಸೇನೆ ಶಾಸಕರನ್ನು ಒಂದು ವೇಳೆ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದರೆ, ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉಳಿಸಲು ಎನ್‌ಸಿಪಿ ನಾಯಕ ಅಜಿತ್ ಪವಾರ್...

ನವದೆಹಲಿ: ಶಿವಸೇನೆಯನ್ನು ಇಬ್ಭಾಗ ಮಾಡಿದ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಶಾಸಕರನ್ನು ಒಂದು ವೇಳೆ ಸುಪ್ರೀಂ ಕೋರ್ಟ್ ಅನರ್ಹಗೊಳಿಸಿದರೆ, ಮಹಾರಾಷ್ಟ್ರದ ಸಮ್ಮಿಶ್ರ ಸರ್ಕಾರ ಉಳಿಸಲು ಎನ್‌ಸಿಪಿ ನಾಯಕ ಅಜಿತ್ ಪವಾರ್ ಮತ್ತೆ ಪಕ್ಷದಿಂದ ಹೊರನಡೆದು ಬಿಜೆಪಿಯೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ.
2019ರಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡು ದಿಢೀರ್ ಪ್ರಮಾಣ ವಚನ ಸ್ವೀಕರಿಸಿ ಎಲ್ಲರನ್ನೂ ಅಚ್ಚರಿಗೆ ಮೂಡಿಸಿದ್ದ ಅಜಿತ್ ಪವಾರ್ ಈಗ ಮತ್ತೊಮ್ಮೆ ಅದೇ ರೀತಿಯ ಪ್ಲಾನ್ ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಏಕನಾಥ್ ಶಿಂಧೆ ಮಾದರಿಯಲ್ಲಿ ಪಕ್ಷದಲ್ಲಿ ಬಂಡಾಯದ ಭಾವುಟ ಹಾರಿಸಿ ಉದ್ದೇಶದಿಂದ ಅಜಿತ್ ಪವಾರ್ ಅವರು ಎನ್‌ಸಿಪಿ ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.
ಅಂತಹ ಯಾವುದೇ ಯೋಚನೆ ಮಾಡಿಲ್ಲ ಎಂದು ಅಜಿತ್ ಪವಾರ್ ಹೇಳಿದ್ದರೂ, ಎನ್‌ಸಿಪಿ ಶಾಸಕರು ಈ ಬೆಳವಣಿಗೆಯ ಬಗ್ಗೆ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಮಾಹಿತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಿವಸೇನೆ ಇಬ್ಭಾಗ ಪ್ರಕರಣದ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮಹಾರಾಷ್ಟ್ರ ಆಡಳಿತ ಮೈತ್ರಿಕೂಟದಲ್ಲಿ ತೀರ್ಪಿನ ಬಗ್ಗೆ ಆತಂಕವಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಸಾಂವಿಧಾನಿಕ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ ಒಬ್ಬರಾದ ನ್ಯಾಯಮೂರ್ತಿ ಎಂ ಆರ್ ಷಾ ಅವರು ಮೇ 15ರಂದು ನಿವೃತ್ತರಾಗುತ್ತಿದ್ದು, ಅದಕ್ಕು ಮೊದಲು ಪ್ರಕರಣದ ಅಂತಿಮ ತೀರ್ಪು ನ್ಯಾಯಾಲಯದಿಂದ ಹೊರಬೀಳುವ ಸಾಧ್ಯತೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


