ದೇಶ

ಕರ್ನಾಟಕ ವಿಧಾನಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ಸಿಇಸಿ ಸಭೆ, ರಾಹುಲ್ ಗಾಂಧಿ ಹಾಜರು

ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಉಳಿದಿರುವ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಕಾಂಗ್ರೆಸ್ ಸಿಇಸಿ ಸಭೆ, ರಾಹುಲ್ ಗಾಂಧಿ ಹಾಜರು
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ನಾಯಕ ರಾಹುಲ್ ಗಾಂಧಿ
Published On :

ನವದೆಹಲಿ: ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಉಳಿದಿರುವ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಪಕ್ಷದ ಕೇಂದ್ರ ಚುನಾವಣಾ ಸಮಿತಿಯ ಸಭೆ ನಡೆಸಿದರು.

ಈ ಸಭೆಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಭಾಗವಹಿಸಿದ್ದರು.

ಇನ್ನುಳಿದ ಪ್ರತಿ ಕ್ಷೇತ್ರಗಳ ಕುರಿತು ಸೂಕ್ಷ್ಮ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಈ ಹಿಂದೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿತ್ತು. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳು ಮತ್ತು ಗುರುವಾರ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿತು. ಹೀಗಾಗಿ ಒಟ್ಟು 224 ಅಭ್ಯರ್ಥಿಗಳ ಪೈಕಿ 166 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಎರಡನೇ ಪಟ್ಟಿಯಲ್ಲಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದ್ದರೂ, ಕೇಂದ್ರ ಚುನಾವಣಾ ಸಮಿತಿಯ ಸಮನ್ವಯದಲ್ಲಿ ಅದನ್ನು ಅಂತಿಮಗೊಳಿಸಲು ರಾಜ್ಯ ನಾಯಕರು ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.