ದೆಹಲಿಯ ಜಾಮಿಯಾ ನಗರದಲ್ಲಿ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ದೆಹಲಿಯ ಜಾಮಿಯಾ ನಗರದಲ್ಲಿ ಶನಿವಾರ ಮಧ್ಯರಾತ್ರಿ ಎಂಬಿಎ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ನವದೆಹಲಿ: ದೆಹಲಿಯ ಜಾಮಿಯಾ ನಗರದಲ್ಲಿ ಶನಿವಾರ ಮಧ್ಯರಾತ್ರಿ ಎಂಬಿಎ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬಳಿ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದು, ವಿದ್ಯಾರ್ಥಿಯ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ.
ಶನಿವಾರ ಮಧ್ಯರಾತ್ರಿ ಪೊಲೀಸರಿಗೆ ಘಟನೆಯ ಬಗ್ಗೆ ಮಾಹಿತಿ ಸಿಕ್ಕಿದ್ದು, ನಂತರ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ.
ಮೃತ ವಿದ್ಯಾರ್ಥಿಯನ್ನು ಅಬ್ದುದ್ದೀನ್(25) ಎಂದು ಗುರುತಿಸಲಾಗಿದ್ದು, ಎರಡನೇ ವರ್ಷದ ಎಂಬಿಎ ವಿದ್ಯಾರ್ಥಿಯಾಗಿದ್ದು, ಪ್ಲಾಸ್ಟಿಕ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


