ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರ ಟೀಕಿಸಿದ ಮತ್ತೊಬ್ಬ ರ‍್ಯಾಪರ್ ವಿರುದ್ಧ ಕೇಸ್ ದಾಖಲು
ತನ್ನ ಹಾಡಿನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಮತ್ತೊಬ್ಬ ರ‍್ಯಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಮುಂಬೈ: ತನ್ನ ಹಾಡಿನಲ್ಲಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ ಆರೋಪದ ಮೇಲೆ ಮುಂಬೈ ಪೊಲೀಸರು ಮತ್ತೊಬ್ಬ ರ‍್ಯಾಪರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಇದರೊಂದಿಗೆ ಮಹಾರಾಷ್ಟ್ರ ಪೊಲೀಸರು ಕಳೆದ ಒಂದು ವಾರದಲ್ಲಿ ಸರ್ಕಾರವನ್ನು ಗುರಿಯಾಗಿಸಿಕೊಂಡು ಹಾಡು ಹಾಡಿದ ಆರೋಪದ ಮೇಲೆ ಇಬ್ಬರು ರ‍್ಯಾಪರ್ ಗಳ ವಿರುದ್ಧ ಕೇಸ್ ದಾಖಲಿಸಿದ್ದಾರೆ.
ಇಂದು ರ‍್ಯಾಪರ್ ಉಮೇಶ್ ಖಾಡೆ ವಿರುದ್ಧ ಮುಂಬೈ ಪೊಲೀಸ್ ಅಪರಾಧ ಗುಪ್ತಚರ ಘಟಕದ ಅಧಿಕಾರಿಗಳು ಕೇಸ್ ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ, ಮುಂಬೈನ ವಡಾಲಾ ಪ್ರದೇಶದ ನಿವಾಸಿ ಉಮೇಶ್ ಖಾಡೆ ಅವರ "ಭೋಂಗ್ಲಿ ಕೇಲಿ ಜನತಾ"(ಜನರು ಎದುರಿಸುತ್ತಿರುವ ನೋವುಗಳು) ಹಾಡಿಗಾಗಿ ಶುಕ್ರವಾರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಖಾಡೆ ಅವರು ಶಂಭೋ ಎಂಬ ಖಾತೆಯ ಹೆಸರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಈ ಹಾಡನ್ನು ಅಪ್‌ಲೋಡ್ ಮಾಡಿದ್ದಾರೆ ಮತ್ತು ಹಾಡು ವೈರಲ್ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಗುರುವಾರ ತನ್ನ ಹಾಡಿನಲ್ಲಿ ಮಹಾರಾಷ್ಟ್ರ ಸರ್ಕಾರವನ್ನು ಟೀಕಿಸಿದ್ದ ಔರಂಗಾಬಾದ್ ಮೂಲದ ರ‍್ಯಾಪರ್ ರಾಜ್ ಮುಂಗಸೆ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


