ಜಾರ್ಖಂಡ್: ಭದ್ರತಾ ಪಡೆಗಳ ಮೇಲೆ ಮಾವೋವಾದಿ ದಾಳಿಗೆ ಸಂಚು, ಓರ್ವ ನಕ್ಸಲ್ ಎನ್ಐಎ ವಶಕ್ಕೆ
ಜಾರ್ಖಂಡ್ ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ 14 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಓರ್ವನನ್ನು ಬಂಧಿಸಿದೆ.

ನವದೆಹಲಿ: ಜಾರ್ಖಂಡ್ ನಲ್ಲಿ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದಡಿ ರಾಷ್ಟ್ರೀಯ ತನಿಖಾ ದಳ 14 ಕಡೆಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದು, ಓರ್ವನನ್ನು ಬಂಧಿಸಿದೆ.
ಕಳೆದ ವರ್ಷ ಭದ್ರತಾ ಪಡೆಗಳ ಮೇಲೆ ಜಾರ್ಖಂಡ್ ನಲ್ಲಿ ದಾಳಿ ನಡೆಸಲು ಸಿಪಿಐ-ಮಾವೋವಾದಿ ಸಿಬ್ಬಂದಿಗಳು ಸಂಚು ರೂಪಿಸಿದ್ದರು.
ಲೋಹರ್ದಗಾದಲ್ಲಿ 9 ಸ್ಥಳಗಳು ಹಾಗೂ ಲತೇಹರ್ ನಲ್ಲಿ 5 ಜಿಲ್ಲೆಗಳಲ್ಲಿ ಎನ್ಐಎ ದಾಳಿ ನಡೆಸಿದ್ದು, ಶಂಕಿತರಿಗೆ ಸಂಬಂಧಿಸಿದ ಪ್ರದೇಶಗಳಲ್ಲಿ ಶೋಧಕಾರ್ಯಾಚರಣೆ ನಡೆಸಲಾಗಿದೆ ಎಂದು ಎನ್ಐಎ ವಕ್ತಾರರು ಹೇಳಿದ್ದಾರೆ. ದಾಳಿಯ ವೇಳೆ ನಾಡ ಬಂದೂಕು 6 ಜಿವಂತ ಗುಂಡುಗಳು, ಒಂದು ಮ್ಯಾಗ್ಜೈನ್, ಎಲೆಕ್ಟ್ರಾನಿಕ್ ಗ್ಯಾಡ್ಜೆಟ್ ಗಳು ಹಾಗೂ ಹಣಕಾಸಿಗೆ ಸಂಬಂಧಪಟ್ಟ ವಹಿವಾಟುಗಳ ವಿವರಗಳನ್ನು ದಾಳಿಯ ವೇಳೆ ವಶಕ್ಕೆ ಪಡೆಯಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.
ದಾಳಿಯ ವೇಳೆ ಸಜನ್ ಕುಮಾರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


