ದೇಶ

ಕೇರಳ: ಠಾಣೆಯಿಂದ ಪರಾರಿಯಾಗಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಹತ್ತಿದ ಕುಡುಕನಿಗೆ ಕರೆಂಟ್ ಶಾಕ್!

ಕೇರಳದ ತ್ರಿಶೂರ್ ಜಿಲ್ಲೆಯ ಚಾಲಕುಡಿ ಪಟ್ಟಣದಲ್ಲಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡ ವ್ಯಕ್ತಿಯೊಬ್ಬ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಹತ್ತಿದ ವಿಲಕ್ಷಣ ಘಟನೆ ನಡೆದಿದೆ.

ಕೇರಳ: ಠಾಣೆಯಿಂದ ಪರಾರಿಯಾಗಿ ಎಲೆಕ್ಟ್ರಿಕ್ ಟ್ರಾನ್ಸ್‌ಫಾರ್ಮರ್ ಹತ್ತಿದ ಕುಡುಕನಿಗೆ ಕರೆಂಟ್ ಶಾಕ್!
ಸಂಗ್ರಹ ಚಿತ್ರ
Published On :

ಕೊಚ್ಚಿ: ಕೇರಳದ ತ್ರಿಶೂರ್ ಜಿಲ್ಲೆಯ ಚಾಲಕುಡಿ ಪಟ್ಟಣದಲ್ಲಿ ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡ ವ್ಯಕ್ತಿಯೊಬ್ಬ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಹತ್ತಿದ ವಿಲಕ್ಷಣ ಘಟನೆ ನಡೆದಿದೆ.

ಪೊಲೀಸರ ಪ್ರಕಾರ, ರಸ್ತೆಯಲ್ಲಿ ಕುಡಿದು ತುರಾಡುತ್ತಿದ್ದ ವ್ಯಕ್ತಿಯನ್ನು ಕಂಡ ಪೊಲೀಸರು ಆತನನ್ನು ವಶಕ್ಕೆ ಪಡೆದು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಆದರೆ ಆತ ಠಾಣೆಯಿಂದ ಓಡಿ ಹೋಗಿದ್ದನು.

ತನ್ನನ್ನು ಬೆನ್ನಟ್ಟಿದ ಪೊಲೀಸರಿಂದ ಮರೆಯಾಗಲು ವ್ಯಕ್ತಿ ರಸ್ತೆಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮೇಲೆ ಹತ್ತಿದ್ದಾನೆ. ಆಮೇಲೆ ಕಂಡಿದ್ದು ಸಿನಿಮಾ ದೃಶ್ಯಕ್ಕಿಂತ ಕಡಿಮೆಯೇನೂ ಇರಲಿಲ್ಲ.

ಇದು ಅಪಾಯಕಾರಿ ಎಂದು ಪೊಲೀಸರು ಆತನನ್ನು ಕೆಳಗಿಳಿಸಲು ಪ್ರಯತ್ನಿಸುತ್ತಿದ್ದರು. ಆದರೆ ಅವನು ಇದಕ್ಕೆ ಲಕ್ಷ್ಯ ಕೊಡಲಿಲ್ಲ. ಈ ವೇಳೆ ವಿದ್ಯುತ್ ತಂತಿ ತಗುಲಿ ಆತ ಕೆಳಗೆ ಬಿದ್ದಿದ್ದಾರೆ.

ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಕರೆಂಟ್ ಶಾಕ್ ನಿಂದಾಗಿ ಆತನಿಗೆ ಯಾವುದೇ ದೊಡ್ಡ ಗಾಯವಾಗಿಲ್ಲ, ಆದರೆ ಕೆಳಗೆ ಬಿದ್ದ ವೇಳೆ ಆತನ ತಲೆಗೆ ಗಾಯವಾಗಿದೆ ಎಂದು ವರದಿಯಾಗಿದೆ. 

ಆತನನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು ನಿಗಾದಲ್ಲಿ ಇರಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.