ದೇಶ

ವೇಗದ ಚಾಲನೆಗೆ ಇಬ್ಬರ ಸಾವು: ಕೇರಳ ಸಂಸದನ ಪುತ್ರನ ಬಂಧನ

ವೇಗದ ಚಾಲನೆಯಲ್ಲಿ ಇಬ್ಬರ ಸವಿಗೆ ಕಾರಣನಾಗಿದ್ದ ಕೇರಳ ಸಂಸದನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ವೇಗದ ಚಾಲನೆಗೆ ಇಬ್ಬರ ಸಾವು: ಕೇರಳ ಸಂಸದನ ಪುತ್ರನ ಬಂಧನ
ಸಾಂಕೇತಿಕ ಚಿತ್ರ
Published On :

ತಿರುವನಂತಪುರಂ: ವೇಗದ ಚಾಲನೆಯಲ್ಲಿ ಇಬ್ಬರ ಸವಿಗೆ ಕಾರಣನಾಗಿದ್ದ ಕೇರಳ ಸಂಸದನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ಕೇರಳ ಕಾಂಗ್ರೆಸ್-ಎಂ ನಾಯಕ ಹಾಗೂ ರಾಜ್ಯಸಭಾ ಸಂಸದ ಜೋಸ್ ಕೆ ಮಣಿ ಅವರ 19 ವರ್ಷದ ಪುತ್ರ ಬಂಧನಕ್ಕೊಳಗಾಗಿರುವ ಆರೋಪಿಯಾಗಿದ್ದು, ಮಣಿಮಲದಲ್ಲಿ ಅತಿ ವೇಗದ ಚಾಲನೆಯಿಂದಾಗಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದರು.
  
ಪೊಲೀಸರ ಪ್ರಕಾರ ಶನಿವಾರ ಸಂಜೆ ಈ ಘಟನೆ ನಡೆದಿದ್ದು, ವಾಹನವನ್ನು ಮಣಿಮಾಲಾ-ಮುವಾಟ್ಟುಪುಳ ರಸ್ತೆಯಲ್ಲಿ ಅತಿ ವೇಗವಾಗಿ ಚಾಲನೆ ಮಾಡುತ್ತಿದ್ದಾಗ ಏಕಾ ಏಕಿ ಬ್ರೇಕ್ ಹಾಕಿದ ಪರಿಣಾಮ, ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಇಬ್ಬರು ಸವಾರರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸವಾರರು ಸಾವನ್ನಪ್ಪಿದ್ದಾರೆ. ಬಂಧಿತ ವ್ಯಕ್ತಿಯನ್ನು ಬೇಲ್ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.