ಕೋವಿಡ್ ಹೆಚ್ಚಳ: ಕೋರ್ಟ್ ನಲ್ಲಿ ಮುನ್ನೆಚ್ಚರಿಕಾ ಕ್ರಮ ಪಾಲಿಸಲು 'ಸುಪ್ರೀಂ' ಸೂಚನೆ
ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್, ಕೋರ್ಟ್ ಆವರಣದಲ್ಲಿ ಮಾಸ್ಕ್ ಧರಿಸುವುದು, ಆಗಾಗ್ಗೆ ಸ್ಯಾನಿಟೈಸರ್ ಗಳ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್, ಕೋರ್ಟ್ ಆವರಣದಲ್ಲಿ ಮಾಸ್ಕ್ ಧರಿಸುವುದು, ಆಗಾಗ್ಗೆ ಸ್ಯಾನಿಟೈಸರ್ ಗಳ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
ದೆಹಲಿಯಲ್ಲಿ ಸೋಮವಾರ 484 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.26.58 ಕ್ಕೆ ಏರಿಕೆಯಾಗಿದೆ. ಸೋಂಕು ಪತ್ತೆ ಪರೀಕ್ಷೆಗೆ ಬರುವ ಪ್ರತಿ ನಾಲ್ಕು ಮಂದಿಯಲ್ಲಿ ಒಬ್ಬರಿಗೆ ಸೋಂಕು ದೃಢಪಡುತ್ತಿರುವುದು ಸ್ಥಳೀಯ ಆರೋಗ್ಯ ಇಲಾಖೆ ಅಂಕಿ-ಅಂಶಗಳ ಮೂಲಕ ತಿಳಿದುಬಂದಿದೆ.
"ದೆಹಲಿಯಲ್ಲಿ ವರದಿಯಾದ ಕೋವಿಡ್ ಪ್ರಕರಣಗಳ ಹಿನ್ನೆಲೆಯಲ್ಲಿ, ಮಾಸ್ಕ್ ಧರಿಸುವುದು, ಹ್ಯಾಂಡ್ ಸ್ಯಾನಿಟೈಸರ್‌ಗಳ ಆಗಾಗ್ಗೆ ಬಳಕೆ ಮತ್ತು ದೈಹಿಕ ಅಂತರವನ್ನು ಕಾಯ್ದುಕೊಳ್ಳುವುದು ಸೇರಿದಂತೆ ತಡೆಗಟ್ಟುವ ಕ್ರಮಗಳನ್ನು ಭಾರತದ ಸುಪ್ರೀಂ ಕೋರ್ಟ್‌ನಲ್ಲಿ ಗಮನಿಸುವಂತೆ ಸಕ್ಷಮ ಪ್ರಾಧಿಕಾರವು ನಿರ್ದೇಶಿಸಿದೆ" ಎಂದು ಏಪ್ರಿಲ್ 10 ರಂದು. ಸುತ್ತೋಲೆ ಹೊರಡಿಸಲಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ ಭಾರತದಲ್ಲಿ ಏ.11 ರಂದು 5,676 ಹೊಸ ಕೊರೋನವೈರಸ್ ಸೋಂಕುಗಳು ದಾಖಲಾಗಿವೆ, ಆದರೆ ಸಕ್ರಿಯ ಪ್ರಕರಣಗಳು 37,093 ಕ್ಕೆ ಏರಿದೆ. ಇನ್ನು 21 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 5,31,000ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


