'ಕೈ' ಎಚ್ಚರಿಕೆ ಹೊರತಾಗಿಯೂ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ!
ರಾಜಸ್ಥಾನ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಪಕ್ಷದ ಎಚ್ಚರಿಕೆ ಹೊರತಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಜೈಪುರ: ರಾಜಸ್ಥಾನ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿರುವ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಪಕ್ಷದ ಎಚ್ಚರಿಕೆ ಹೊರತಾಗಿಯೂ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಎಚ್ಚರಿಕೆಯ ನಡುವೆಯೂ ರಾಜಸ್ಥಾನದ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿದ್ದಾರೆ. ಮಂಗಳವಾರ ಇಲ್ಲಿಯ ಶಹೀದ್ ಸ್ಮಾರಕದಲ್ಲಿ ಅಹೋರಾತ್ರಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.
ಈ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೆ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಗಳನ್ನು ತನಿಖೆಗೊಳಪಡಿಸುವಂತೆ ಅವರು ಆಗ್ರಹಿಸಿದ್ದಾರೆ. ಸಮಾಜ ಸುಧಾರಕ ಜ್ಯೋತಿರಾವ್ ಫುಲೆ ಅವರ ಜನ್ಮದಿನದ ಅಂಗವಾಗಿ ಸಚಿನ್ ಪೈಲಟ್ ಪುಷ್ಪ ನಮನ ಸಲ್ಲಿಸಿ ಉಪವಾಸ ಕುಳಿತರು.
ಶಹೀದ್ ಸ್ಮಾರಕವನ್ನು ತಲುಪುವ ಮೊದಲು, ಕಾಂಗ್ರೆಸ್ ಮುಖಂಡರು ತಮ್ಮ ನಿವಾಸದಿಂದ 22 ಗೋಡೌನ್ ವೃತ್ತಕ್ಕೆ ತೆರಳಿ ಫುಲೆ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


