ಕಾಳಿ ಪೋಸ್ಟರ್ ವಿವಾದ: ಲೀನಾ ಮಣಿಮೇಕಲೈ ವಿರುದ್ಧದ ಎಫ್‌ಐಆರ್ ಒಟ್ಟುಗೂಡಿಸಲು ಸುಪ್ರೀಂ ಆದೇಶ
ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿಮಾತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ...

ನವದೆಹಲಿ: ಸಾಕ್ಷ್ಯಚಿತ್ರದ ಪೋಸ್ಟರ್‌ನಲ್ಲಿ ಕಾಳಿಮಾತೆ ಕೈಯಲ್ಲಿ ಸಿಗರೇಟ್ ಇರುವುದನ್ನು ವಿರೋಧಿಸಿ ಚಲನಚಿತ್ರ ನಿರ್ದೇಶಕಿ ಲೀನಾ ಮಣಿಮೇಕಲೈ ಅವರ ವಿರುದ್ಧ ದೇಶದ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರಿಗೆ ವರ್ಗಾಯಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.
ಮಧ್ಯಪ್ರದೇಶ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ದೆಹಲಿಯಲ್ಲಿ ನಿರ್ದೇಶಕಿ ಮಣಿಮೇಕಲೈ ಅವರ ವಿರುದ್ಧ ಅನೇಕ ಎಫ್‌ಐಆರ್‌ಗಳು ದಾಖಲಾಗಿವೆ.
ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ಕ್ಲಬ್ ಮಾಡಿ ರದ್ದುಗೊಳಿಸುವಂತೆ ಕೋರಿ ನಿರ್ದೇಶಕಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಅವರ ಪೀಠ, ಬಲವಂತದ ಕ್ರಮದಿಂದ ಮಣಿಮೇಕಲೈ ಅವರನ್ನು ರಕ್ಷಿಸುವ ತನ್ನ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.
ಇದೇ ವೇಳೆ ನಿರ್ದೇಶಕಿ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ದೆಹಲಿ ವರ್ಗಾಯಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ಎಫ್ಐಆರ್ ರದ್ದುಗೊಳಿಸುವ ಸಂಬಂಧ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯವನ್ನು ಮಣಿಮೇಕಲೈ ಅವರಿಗೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


